AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide: ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡ ವೈದ್ಯಕೀಯ ವಿದ್ಯಾರ್ಥಿನಿ

ಬಾಗಲಕೋಟೆ ತಾಲೂಕಿನ ದೇವಲಾಪುರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಮುದಕವ್ವ ಮುತ್ತಗಿ(37) ಎಂಬುವವರು ಮೃತಪಟ್ಟಿದ್ದಾರೆ.

Suicide: ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡ ವೈದ್ಯಕೀಯ ವಿದ್ಯಾರ್ಥಿನಿ
ಸಂದ್ರಾ
TV9 Web
| Edited By: ಆಯೇಷಾ ಬಾನು|

Updated on: May 11, 2022 | 10:29 PM

Share

ಮಂಗಳೂರು: ಕಾಲೇಜಿನ ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯ ಕಾಲೇಜಿನ ವಿದ್ಯಾರ್ಥಿನಿ ಕೇರಳದ ಸಂದ್ರಾ(21) ಆತ್ಮಹತ್ಯೆ‌ ಮಾಡಿಕೊಂಡ ವಿದ್ಯಾರ್ಥಿನಿ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸಾವು ಬಾಗಲಕೋಟೆ ತಾಲೂಕಿನ ದೇವಲಾಪುರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಮುದಕವ್ವ ಮುತ್ತಗಿ(37) ಎಂಬುವವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈಜಲು ಹೋಗಿ ಅಕ್ಕ, ತಂಗಿ ನೀರುಪಾಲು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅಗರದಳ್ಳಿ ಬಳಿಯ ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ, ತಂಗಿ ನೀರುಪಾಲು ಆಗಿದ್ದಾರೆ. ಅಕ್ಕ ಚಂದು(15), ತಂಗಿ ಹರ್ಷಾ(11) ಮೃತರು. ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇತರೆ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಳೆ ನೀರಿನಿಂದ ತುಂಬಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು ಕೊಪ್ಪಳ‌ ನಗರದ ಕೆ.ಎಸ್.ಆಸ್ಪತ್ರೆಯ ಮುಂಭಾಗ ಮಳೆ ನೀರಿನಿಂದ ತುಂಬಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಕೊಪ್ಪಳ ತಾಲೂಕಿನ ಮೈನಳ್ಳಿ ನಿವಾಸಿ ಶ್ರೀದೇವಿ(15) ಮೃತ ಬಾಲಕಿ. ನಿನ್ನೆ K.S.ಆಸ್ಪತ್ರೆಗೆ ಊಟ ಕೊಡಲು ಬಂದಿದ್ದಾಗ ದುರಂತ ಸಂಭವಿಸಿದೆ. ಕಾಮಗಾರಿಗಾಗಿ ಅಗೆದಿದ್ದ ಗುಂಡಿಯಲ್ಲಿ ಮಳೆ ನೀರು ತುಂಬಿತ್ತು. ನಿನ್ನೆ ಸಂಜೆ ಮಳೆ ನೀರು ತುಂಬಿದ್ದ ಗುಂಡಿಗೆ ಬಾಲಕಿ ಬಿದ್ದಿದ್ದಾಳೆ. ನಿನ್ನೆ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಸದ್ಯ ಗುಂಡಿಯಲ್ಲಿ ಶ್ರೀದೇವಿ ಶವ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ಸಾವು ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಹೊರಬರಲಾಗದೇ ಒದ್ದಾಡಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ದೊಡ್ಡಸೋಮಣ್ಣರ ಜಯ್ಯಪ್ಪ(45) ಸಾವನ್ನಪ್ಪಿದ ವ್ಯಕ್ತಿ. ಮೇವು ಕಟಾವ್ ಮಾಡಿ ತರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊನೆಗೆ ಗ್ರಾಮಸ್ಥರು ಜೆಸಿಬಿಯಿಂದ ಟ್ರ್ಯಾಕ್ಟರ್ ಮೇಲೆತ್ತಿ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು