ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಒಂದೆಡೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ ಎನ್ನುತ್ತಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ಆರೋಗ್ಯದ ವಿಚಾರದಲ್ಲಿ ಅದೇ ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ಸೃಷ್ಟಿಯಾಗಿದೆ. ಇದಕ್ಕೆ ಬಲವಾದ ಕಾರಣವೂ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಅಗತ್ಯ ಔಷಧಗಳ ತೀವ್ರ ಕೊರತೆ ಇದ್ದು, ಬಡವರು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​​ಗಳನ್ನು ಅವಲಂಬಿಸಬೇಕಾಗಿ ಬಂದಿದೆ.

ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: Ganapathi Sharma

Updated on: Nov 18, 2024 | 11:38 AM

ಬೆಂಗಳೂರು, ನವೆಂಬರ್ 18: ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ದಾಸ್ತಾನಿಲ್ಲದಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಔಷಧ ಸಿಗುವ ಗ್ಯಾರಂಟಿಯೇ ಇಲ್ಲವಾಗಿದೆ. ಒಂದೆಡೆ, ಆಗಾಗ್ಗೆ ಬದಲಾಗುವ ವಾತಾವರಣದಿಂದಾಗಿ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಇಂಥ ಪರಿಸ್ಥಿತಿಯಲ್ಲಿಯೇ ಔಷಧ ದಾಸ್ತಾನು ಕೊರತೆ ಉಂಟಾಗಿರುವುದು ಸಮಸ್ಯೆಗೆ ಕಾರಣವಾಗಿದೆ.

ಸರ್ಕಾರಿ ಔಷಧ ದಾಸ್ತಾನು ಕೇಂದ್ರಗಳಲ್ಲಿ ಔಷಧಗಳು ಖಾಲಿಯಾಗಿವೆ. ಮತ್ತೊಂದೆಡೆ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಸಂಪೂರ್ಣ ಖಾಲಿ ಆಗಿದೆ.

ಔಷಧ ಕೊರತೆಗೆ ಕಾರಣವೇನು?

ಟೆಂಡರ್ ಪ್ರಕ್ರಿಯೆ ವಿಳಂಬವಾಗಿರುವುದೇ ಔಷಧ ಕೊರತೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಇದೇ ಕಾರಣದಿಂದ ಜೀವರಕ್ಷಕ ಔಷಧಗಳ ಪೂರೈಕೆಯೂ ಸ್ಥಗಿತವಾಗಿದೆ. ಹೀಗಾಗಿ ಬಡ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಯಾವೆಲ್ಲ ಔಷಧಗಳು ಔಟ್ ಆಫ್ ಸ್ಟಾಕ್?

ಔಷಧ ಪೂರೈಕೆಗೆ ಪ್ರತಿ ವರ್ಷ ಕೆಎಸ್ಎಂಸಿಎಲ್ (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ) ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಆದಾಗ್ಯೂ ಈ ವರ್ಷ ಔಷಧ ಕೊರತೆ ಎದುರಾಗಿದೆ. ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳಿಗೆ ನೀಡುವ ಔಷಧಗಳೇ ಸದ್ಯಕ್ಕೆ ಔಟ್ ಆಫ್ ಸ್ಟಾಕ್ ಆಗಿವೆ.

ಇದನ್ನೂ ಓದಿ: ಮಧುಮೇಹ ರೋಗಿಗಳಿಗೆ ನಸುಕಂದು ಮಚ್ಚೆಗಳು ಏಕೆ ಬರುತ್ತವೆ?

ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಲ್, ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಾ, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಕೊರತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ