ಕೊರೊನಾ ನೈಟ್ ಕರ್ಫ್ಯೂ ಜಾರಿ; ಪೊಲೀಸ್ ಅಧಿಕಾರಿಗಳ ಜೊತೆ ಇಂದು ಕಮಲ್ ಪಂತ್ ಸಭೆ
ಏಪ್ರಿಲ್ 10ರಿಂದ 20ರವರೆಗೆ ಕೊರೊನಾ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಬೆಂಗಳೂರು: ಏಪ್ರಿಲ್ 10ರಿಂದ 20ರವರೆಗೆ ಕೊರೊನಾ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಇಂದು ನಗರದ ಪೊಲೀಸ್ ಆಯುಕ್ತರ ನೇತೃತ್ವದ ಸಭೆ ನಡೆಯಲಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ನೇತೃತ್ವದಲ್ಲಿ ಎಲ್ಲಾ ಡಿಸಿಪಿಗಳ ಜೊತೆ ಸಭೆ ಜರುಗಲಿದೆ. ಸಭೆಯಲ್ಲಿ ನೈಟ್ ಕರ್ಫ್ಯೂನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.
ದಿನ ಸಾಗುತ್ತಿದ್ದಂತೆಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಕರ್ಫ್ಯೂ ವೇಳೆ ಪೊಲೀಸರಿಂದ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳೇನು? ಎಂಬುದರ ಕುರಿತಾಗಿ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.
ನೈಟ್ ಕರ್ಫ್ಯೂ ವೇಳೆ ಪೊಲೀಸರ ನಿಯೋಜನೆ ಸೇರಿದಂತೆ ಜೊತೆಗೆ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ರಾತ್ರಿಯಲ್ಲಿ ಜನರ ಓಡಾಟ ನಿಯಂತ್ರಿಸಲು ಪೊಲೀಸರು ಮುಂದಾಗುತ್ತಿದ್ದಾರೆ.
ರಾತ್ರಿ ವೇಳೆ ಸಂಚಾರಕ್ಕೆ ಸಂಪೂರ್ಣ ನಿಷೇಧ ಸಾಧ್ಯತೆ ಇದೆ. ರಾತ್ರಿ 10ಗಂಟೆ ನಂತರ ಖಾಸಗಿ ವಾಹನಗಳ ಸಂಚಾರ ನಿಷೇಧ ಮಾಡಲಾಗುತ್ತದೆ. ಅಗತ್ಯವಿದ್ದಲ್ಲಿ ದಾಖಲೆ ಹಾಗೂ ನಿಖರ ಕಾರಣ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಪೂರೈಕೆಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವುದರ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗುವುದು. ಇಂದು ಸಂಜೆಯವೊಳಗೆ ಕರ್ಫ್ಯೂನಲ್ಲಿ ಪೊಲೀಸ್ ಬಂದೋಬಸ್ತ್ ಬಗ್ಗೆ ಅಧಿಕೃತ ಮಾಹಿತಿ ತಿಳಿಯಲಿದೆ.
ಇದನ್ನೂ ಓದಿ: Night Curfew: ಕರ್ನಾಟಕದ ಯಾವ್ಯಾವ ನಗರಗಳಲ್ಲಿ ಕೊರೊನಾ ಕರ್ಫ್ಯೂ? ಇಲ್ಲಿದೆ ಸಂಪೂರ್ಣ ಮಾಹಿತಿ
ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?