AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ; ಆರೋಪಿ ಬಂಧನ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನಿಂದ 4.22 ಕೋಟಿ ಮೌಲ್ಯದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು, ಆರೋಪಿಯನ್ನು ನ್​​ಡಿಪಿಎಸ್​​ ಕಾಯ್ದೆಯಡಿ ಬಂಧಿಸಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಕೆಲ ದಿನಗಳ ಹಿಂದೆಯೂ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೆಂಬುದು ಇಲ್ಲಿ ಗಮನಾರ್ಹ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ; ಆರೋಪಿ ಬಂಧನ
ಸಾಂದರ್ಭಿಕ ಚಿತ್ರImage Credit source: Getty Images
ನವೀನ್ ಕುಮಾರ್ ಟಿ.
| Edited By: |

Updated on:Jul 12, 2026 | 10:54 AM

Share

ಮುಖ್ಯಾಂಶಗಳು

  • ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ
  • ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಮಾದಕ ವಸ್ತು ವಶ
  • 12.07 ಕೆಜಿ ಹೈಡ್ರೋಪೋನಿಕ್ ಗಾಂಜಾ ಜಪ್ತಿ

ದೇವನಹಳ್ಳಿ, ಜುಲೈ 12: ಪ್ರಯಾಣಿಕನೋರ್ವ ವಿದೇಶದಿಂದ ತಂದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ನಡೆದಿದೆ. 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್​​ಡಿಪಿಎಸ್​​ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

4.22 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಇನ್ನು ಬಂಧಿತ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿರುವ ಹೈಡ್ರೋಪೋನಿಕ್ ಗಾಂಜಾದ ಮೌಲ್ಯ ಸುಮಾರು 4 ಕೋಟಿ 22 ಲಕ್ಷ ರೂಪಾಯಿಗಳು ಎನ್ನಲಾಗಿದೆ. ಬ್ಯಾಂಕಾಕ್​​ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್​​ನಲ್ಲ ಮಾದಕ ವಸ್ತುವನ್ನು ಅಡಗಿಸಿಟ್ಟುಕೊಂಡು ಬರುವ ಮೂಲಕ ಸಾಗಾಟ ಯತ್ನ ನಡೆಸಿದ್ದ. ಆದರೆ ಏರ್​​ಪೋರ್ಟ್​​ಬಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಗಾಂಜಾವನ್ನು ಅದಿಕಾರಿಗಳು ಪತ್ತೆಹಚ್ಚಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್; 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್!

ಇತ್ತೀಚೆಗೆ ಜೂನ್​​ 26ರಂದು ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 2.086 ಕೋಟಿ ರೂಪಾಯಿ ಮೌಲ್ಯದ 5.960 ಕೆಜಿ ಹೈಡ್ರೋಪೊನಿಕ್ ಗಾಂಜಾ ಪತ್ತೆ ಮಾಡಿದ್ದರು. ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಪ್ರಯಾಣಿಕನಿಂದ ಅಂದಾಜು 5.58 ಕೋಟಿ. ಮೌಲ್ಯದ 6.98 ಕೆಜಿ ಮೆಸ್ಕಲಿನ್ (Mescaline) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಎರಡೂ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಿದ್ದರು. ಜೂ. 17ರಂದು ಪ್ರಯಾಣಿಕನಿಂದ 5.43 ಕೋಟಿ ಮೌಲ್ಯದ 15.520 ಕೆಜಿ ಹೈಡ್ರೋಪೊನಿಕ್ ಗಾಂಜಾ ಮತ್ತು ಜೂ. 29ರಂದು ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ 8.00 ಕೆಜಿ ತೂಕವಿರುವ 2.80 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:36 am, Sun, 12 July 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!