ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ವಿಜಯೇಂದ್ರ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ತೀರ್ಮಾನ

​ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಸರ್ಕಾರಕ್ಕೆ ಮುಡಾ ಹಗರಣ ಸಂಕಷ್ಟ ತಂದಿಟ್ಟಿದೆ. ಇದೇ ಹಗರಣದ ವಿರುದ್ಧ ಹೋರಾಟ ಮಾಡಲು ಮುಂದಾಗಿರುವ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ದೋಸ್ತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ ಬಿಜೆಪಿಯಲ್ಲೇ ಆಂತರಿಕ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅತೃಪ್ತರ ಟೀಮ್ ಫುಲ್ ಆಕ್ಟೀವ್ ಆಗಿದೆ.

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ವಿಜಯೇಂದ್ರ ವಿರುದ್ಧ ಹೈಕಮಾಂಡ್​ಗೆ ದೂರು ನೀಡಲು ತೀರ್ಮಾನ
ಬಿಜೆಪಿ ಅತೃಪ್ತ ನಾಯಕರ ಸಭೆ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Aug 02, 2024 | 2:23 PM

ಬೆಂಗಳೂರು, (ಆಗಸ್ಟ್ 01): ಒಂದೆಡೆ ಮುಡಾ ಹಗರಣ ಆರೋಪದಲ್ಲಿ ರಾಜ್ಯಪಾಲರ ನಡೆ ರಾಜ್ಯರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಪಾಳಯದಲ್ಲೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಹೌದು.. ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್ ಆಗಿದ್ದು, ಅತೃಪ್ತ ನಾಯಕರನ್ನು ಒಂದು ಕಡೆ ಸೆಳೆಯುವ ಪ್ರಯತ್ನವನ್ನು ಬಸನಗೌಡ ಪಾಟೀಲ್ ಮತ್ತು ರಮೇಶ್ ಜಾರಕಿಹೊಳಿಯಿಂದ ಕಸರತ್ತು ನಡೆದಿದೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಕುಳಿತು ಅಸಮಾಧಾನಿತ ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ ಜೊತೆ ಚರ್ಚೆ ನಡೆಸಿದ್ದಾರೆ. ಈ ಮೂಲಕ ವಿಜಯೇಂದ್ರ ನಾಯಕತ್ವಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಬೆಂಗಳೂರು ಟು ಮೈಸೂರು ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಅತೃಪ್ತ ನಾಯಕರು ತೀರ್ಮಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸದಾಶಿವನಗರದಲ್ಲಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ ನಡೆದಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್​, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ ಮಹತ್ವದ ಸಭೆ ನಡೆಸಿದ್ದು, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಇನ್ನೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ಮಾಡಲು ಯತ್ನಾಳ್, ರಮೇಶ್ ಜಾರಕಿಹೊಳಿ ಮುಂದಾಗಿದ್ದು, ವಿಜಯೇಂದ್ರ ಬಣದ ವಿರುದ್ಧ ಹೈಕಮಾಂಡ್​ಗೆ ಚಾರ್ಜ್​ಶೀಟ್​ ಸಲ್ಲಿಸಲು ಪ್ಲ್ಯಾನ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: BJP JDS Padayatra: ಎಚ್​ಡಿಕೆ ಮನವೊಲಿಕೆ ಸಕ್ಸಸ್: ಜೆಡಿಎಸ್-ಬಿಜೆಪಿಯಿಂದ ಮೈಸೂರು ಪಾದಯಾತ್ರೆ ಫಿಕ್ಸ್

ಇಂದಿನ ಸಭೆಯಲ್ಲಿ ಏನೇನು ಆಯ್ತು?

ಕುಮಾರ್​ ಬಂಗಾರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈಸೂರು ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಲಾಗಿದೆ. ಒಂದು ವೇಳೆ ಹೈಕಮಾಂಡ್, ಪಕ್ಷದಿಂದ ಪಾಲ್ಗೊಳ್ಳಲು ಸೂಚಿಸಿದ್ರೆ ಭಾಗಿಯಾಗಬೇಕೆನ್ನುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆ ಬಳಿಕ ಸೋಲಿನ ಕಾರಣ ಹುಡುಕುವ ಕೆಲಸ ಆಗಿಲ್ಲ. ಈ ಬಗ್ಗೆ ಹೇಳಿದರೂ ಸರಿಪಡಿಸುವ ಕೆಲಸ ಆಗಿಲ್ಲ. ರಾಷ್ಟ್ರೀಯ ಅಧ್ಯಕ್ಷರ ನೇಮಕ ಆಗುವ ವೇಳೆ ರಾಜ್ಯ ಘಟಕಕ್ಕೂ ಚುನಾವಣೆ ನಡೆಯಬೇಕು. ಚುನಾವಣೆ ಆಧಾರದಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಬೇಕು. ಈಗ ನಾಮನಿರ್ದೇಶನ ಮಾಡಿರುವ ಬಿಜೆಪಿ ರಾಜ್ಯ ಅಧ್ಯಕ್ಷರಿದ್ದಾರೆ. ಚುನಾವಣೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿ ಎನ್ನುವ ಬಗ್ಗೆ ಚರ್ಚಿಸಿದ್ದು, ಈ ಎಲ್ಲಾ ಅಂಶಗಳನ್ನು ಸಮಾನ ಮನಸ್ಕರ ನಾಯಕರ ಸಭೆ ಬಳಿಕ ಹೈಕಮಾಂಡ್​ ಮುಂದಿಡಲು ತೀರ್ಮಾನಿಸಿದ್ದಾರೆ.

ಹೈಕಮಾಂಡ್​ ಭೇಟಿಗೆ ನಿರ್ಧರಿಸಲಾಗಿದೆ ಎಂದ ಯತ್ನಾಳ್

ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗುತ್ತಿಲ್ಲ. ಅಪ್ಪ ಮಕ್ಕಳ ಪಕ್ಷವಾಗಿರುವುದನ್ನು ಮುಕ್ತ ಮಾಡಬೇಕು . ಲೋಕಸಭಾ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಮತ್ತು ಯಡಿಯೂರಪ್ಪ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದನ್ನು ಹೈಕಮಾಂಡ್ ಗಮನಕ್ಕೆ ತರಬೇಕು. ಅದಕ್ಕೆ ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡಾ ಹೈಕಮಾಂಡ್ ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್ ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ. ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಎಂದು ನನಗೆ ಅನ್ನಿಸಿರಲಿಲ್ಲ. ವಿಧಾನಸಭೆಯಲ್ಲಿ ಡಿ.ಕೆ. ಶಿವಕುಮಾರ್ ಏಜೆಂಟ್ ಆಗಿ ವಿಜಯೇಂದ್ರ ಕೆಲಸ ಮಾಡಿದರು. ಡಿ.ಕೆ. ಶಿವಕುಮಾರ್ ಮುಂದೆ ಫೈಲ್ ಒಯ್ದು ದಯನೀಯವಾಗಿ ನಿಲ್ಲುವ ರಾಜ್ಯಾಧ್ಯಕ್ಷ ಇರುವುದು ಪಕ್ಷಕ್ಕೆ ಶೋಭೆಯಲ್ಲ. ನಾನು ಮಾತಾಡಿದ ಬಳಿಕ ಸತ್ಯ ಮಾತಾಡಿದ್ದೀರಿ, ಮಾತಾಡದೇ ಇದ್ದರೆ ಪಕ್ಷ ಉಳಿಯುವುದಿಲ್ಲ ಎಂದು ಫೋನ್ ಗಳು ಬರುತ್ತಿವೆ. ಬಳ್ಳಾರಿ ಪಾದಯಾತ್ರೆ ಬಗ್ಗೆ ಹೈಕಮಾಂಡ್ ಗೆ ರಮೇಶ್ ಜಾರಕಿಹೊಳಿ ಕೇಳಿಕೊಂಡಿದ್ದಾರೆ. ಹೈಕಮಾಂಡ್ ಅನುಮತಿ ಕೊಟ್ಟರೆ ಪಾದಯಾತ್ರೆ ಮಾಡುತ್ತೇವೆ ಎಂದು ಖಡಕ್​ ಆಗಿ ಕಡ್ಡಿ ಮುರಿದಂತೆ ಹೇಳಿದರು.

ಬಿಜೆಪಿ ಸಮಾನ ಮನಸ್ಕರ ನಾಯಕರ ಸಭೆ

ಇಂದು (ಆಗಸ್ಟ್ 01) ಅನೌಪಚಾರಿಕವಾಗಿ ಯತ್ನಾಳ್ ಮತ್ತು ರಮೇಶ್​ ಜಾರಕಿಹೊಳಿ, ಪ್ರತಾಪ್ ಸಿಂಹ ಸಭೆ ನಡೆಸಿದ್ದು, ಮುಂದಿನ ನಡೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಬಣಕ್ಕೆ ಇನ್ನಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಮುಂದಿನ ದಿನಗಳಲ್ಲಿ ವಿಜಯೇಂದ್ರ ನಾಯಕತ್ವವನ್ನು ಪ್ರಶ್ನಿಸುವ ಚಿಂತನೆ ನಡೆದಿದೆ. ಇದಕ್ಕಾಗಿ ನಾಳೆ(ಆಗಸ್ಟ್ 02) ಸಂಜೆ ಅಥವಾ ನಾಡಿದ್ದು ಬಿಜೆಪಿ ಸಮಾನ ಮನಸ್ಕರ ನಾಯಕರ ಸಭೆ ಕರೆಯಲಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಬೆಂಗಳೂರು ಹೊರವಲಯದಲ್ಲಿ ಈ ಸಮಾನ ವಯಸ್ಕರರ ಸಭೆ ನಡೆಯಲಿದ್ದು, ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಸಭೆಯ ಬಳಿಕ ಸಭೆಯ ನಿರ್ಧಾರಗಳು ಅಧಿಕೃತವಾಗಿಯೇ ಪ್ರಕಟಣೆ ಮೂಲಕ ಮಾಹಿತಿ ನೀಡುವ ಸಾಧ್ಯತೆಗಳಿವೆ. ಇನ್ನು ಈ ಸಭೆಯಲ್ಲಿ ಸುಮಾರು ಶೇ.15ರಷ್ಟು ಮುಖಂಡರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮುಖ್ಯವಾಗಿ ಈ ಸಭೆಯ ಬಳಿಕ ಒಂದು ವರದಿ ತಯಾರಿಸಿಕೊಂಡು ಹೈಕಮಾಂಡ್ ಭೇಟಿ ಮಾಡಲು ತೀರ್ಮಾನವಾಗಿದೆ.

ಒಟ್ಟಿನಲ್ಲಿ ಒಂದೆಡೆ ಕಾಂಗ್ರೆಸ್ ಸರ್ಕಾರಕ್ಕೆ ಮುಡಾ ಹಗರಣ ಭಯ ಕಾಡುತ್ತಿದ್ದರೆ, ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅತೃಪ್ತ ನಾಯಕರ ಬಣ ಸಿಡಿದೆದ್ದಿದ್ದು, ಹೈಕಮಾಂಡ್​ ಮೊರೆ ಹೋಗಲು ತೀರ್ಮಾನಿಸಿದೆ.

Published On - 7:58 pm, Thu, 1 August 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ