ಮೇಕೆದಾಟು: ಕರ್ನಾಟಕದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ತಮಿಳುನಾಡು

|

Updated on: Mar 25, 2025 | 8:09 AM

ತಮಿಳುನಾಡು ಸರ್ಕಾರವು ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾವೇರಿ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಘೋಷಿಸಿದ್ದಾರೆ.

ಮೇಕೆದಾಟು: ಕರ್ನಾಟಕದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ತಮಿಳುನಾಡು
ಮೇಕೆದಾಟು ಯೋಜನೆ ತಡೆಗೆ ಎಲ್ಲ ರೀತಿಯ ಕ್ರಮ: ದೊರೈ ಮುರುಗನ್
Follow us on

ಚೆನ್ನೈ, ಮಾರ್ಚ್ 25: ಮೇಕೆದಾಟು ಅಣೆಕಟ್ಟು (Mekedatu Project) ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ, ಕಾವೇರಿ ನದಿಗೆ (Cauvery River) ಜಲಾಶಯ ನಿರ್ಮಿಸುವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು (Tamil Nadu) ಸರ್ಕಾರ ಹೇಳಿದೆ. ಮೇಕೆದಾಟು ಯೋಜನೆಯನ್ನು ತಡೆಯುವುದಕ್ಕಾಗಿ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. 2025-2026ರ ನೀತಿ ಟಿಪ್ಪಣಿಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಿದ ಮುರುಗನ್, ಮೇಕೆದಾಟು ಯೋಜನೆ ಸಂಬಂಧ ಕರ್ನಾಟಕವು ಇನ್ನೂ ಅಂತಿಮ ಡಿಪಿಆರ್ ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಕರ್ನಾಟಕವು 67.16 ಟಿಎಂಸಿ ಸಾಮರ್ಥ್ಯದ ಜಲಾಶಯವನ್ನು ನಿರ್ಮಿಸಲು ಪ್ರಸ್ತಾಪಿಸಿದೆ. ಆದರೆ, ನದಿಪಾತ್ರದ ಕೆಳಗಿನ ರಾಜ್ಯವಾದ ತಮಿಳುನಾಡಿನ ಅನುಮತಿಯಿಲ್ಲದೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಈ ಯೋಜನೆಯು ಕರ್ನಾಟಕದಿಂದ ನದಿ ನೀಡಿನ ನೈಸರ್ಗಿಕ ನೀರಿನ ಹರಿವಿಗೆ ತಡೆಯೊಡ್ಡಲಿದೆ ಎಂಬುದು ತಮಿಳುನಾಡಿನ ವಾದವಾಗಿದೆ.

ಕರ್ನಾಟಕದ ಯೋಜನೆ ತಡೆಗೆ ಎಲ್ಲ ಕ್ರಮ: ದೊರೈ ಮುರುಗನ್

ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶ ಮತ್ತು ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲಂಘಿಸಿ ಕರ್ನಾಟಕವು ಮೇಕೆದಾಟು ಅಥವಾ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಯಾವುದೇ ಸ್ಥಳದಲ್ಲಿ ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ತಮಿಳುನಾಡು ಸರ್ಕಾರವು ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ದೊರೈ ಮುರುಗನ್ ಹೇಳಿದ್ದಾರೆ.

ಇದನ್ನೂ ಓದಿ
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು?
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಕೃಷ್ಣ ನದಿ ಮತ್ತು ಕಳಸಾಬಂಡೂರಿ ಯೋಜನೆಗಳನ್ನೂ ಚರ್ಚಿಸಲಾಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಡಿಕೆ ಶಿವಕುಮಾರ್ ಮನವಿ ಬೆನ್ನಲ್ಲೇ ತಮಿಳುನಾಡು ಕ್ಯಾತೆ

ಮೇಕೆದಾಟು ಯೋಜನೆಗೆ ಆದ್ಯತೆಯ ಮೇರೆಗೆ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ತಿಂಗಳು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವರು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಹಾಗಊ ಸುತ್ತಮುತ್ತಲಿನ ಪ್ರದೇಶಗಳಿಂದ ಕೊಳಚೆ ನೀರು ಮತ್ತು ಕೈಗಾರಿಕಾ ತ್ಯಾಜ್ಯ ನೀರನ್ನು ಕರ್ನಾಟಕವು ಕಾವೇರಿ ಮತ್ತು ಪೆನ್ನೈಯಾರ್ ನದಿಗಳಿಗೆ ಬಿಡುತ್ತಿರುವ ಬಗ್ಗೆ ಮಾತನಾಡಿದ ದೊರೈ ಮುರುಗನ್, ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯು ಅಂತರರಾಜ್ಯ ಗಡಿಯ ಬಳಿಯ ಕಾವೇರಿ ಮತ್ತು ಪೆನ್ನೈಯಾರ್ ನದಿಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸುತ್ತಿದೆ. ಮಾದರಿಗಳ ಗುಣಮಟ್ಟವನ್ನು ಪರೀಕ್ಷಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಕಿ ಕೆರೆಯಲ್ಲಿ ‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ

ಕೇಂದ್ರ ಜಲ ಆಯೋಗ ಕೂಡ ಬಿಳಿಗುಂಡ್ಲುವಿನಲ್ಲಿ ಕಾವೇರಿ ನದಿಯ ನೀರಿನ ಮಾದರಿಗಳನ್ನು ಸಂಗ್ರಹಿಸಿ ಅದರ ಗುಣಮಟ್ಟವನ್ನು ಪರಿಶೀಲನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ