AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲಣಗವಿ ಮಠದ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ; ಕಿಚ್ಚ ಸುದೀಪ್​ಗೂ ಆತಂಕ?

ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್​ ಅಭಿಮಾನಿಗಳಿಗೂ ಆತಂಕ ಶುರುವಾಗಿದೆ. ಏಪ್ರಿಲ್​ 4 ರಂದು ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್​ಗೆ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದರು.

ಮೇಲಣಗವಿ ಮಠದ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ; ಕಿಚ್ಚ ಸುದೀಪ್​ಗೂ ಆತಂಕ?
ಪ್ರಾತಿನಿಧಿಕ ಚಿತ್ರ
Skanda
|

Updated on: Apr 09, 2021 | 9:13 AM

Share

ನೆಲಮಂಗಲ: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನೆಲಮಂಗಲ ತಾಲ್ಲೂಕು ಶಿವಗಂಗೆಯ ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಜಿಲ್ಲೆಯಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದರೂ ನಡೆದಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಶ್ರೀಗಳು ಪಾಲ್ಗೊಂಡಿದ್ದು, ಇದೀಗ ಅವರಿಗೆ ಕೊರೊನಾ ಪಾಸಿಟಿವ್​ ದೃಢವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಸಾವಿರಾರು ಜನ ಸೇರಿದ್ದ ಕಾರ್ಯಕ್ರಮ ನೆರವೇರಿದ ಎರಡು ದಿನಗಳ ನಂತರ ಅಂದರೆ ಏಪ್ರಿಲ್​ 6ಕ್ಕೆ ಮೇಲಣಗವಿ ಮಠದ ಪೀಠಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಶ್ರೀಗಳಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಹೋಂ ಐಸೋಲೇಷನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ.

ಕಿಚ್ಚ ಸುದೀಪ್​ಗೂ ಕೊರೊನಾ ಭಯ? ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್​ ಅಭಿಮಾನಿಗಳಿಗೂ ಆತಂಕ ಶುರುವಾಗಿದೆ. ಏಪ್ರಿಲ್​ 4 ರಂದು ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್​ಗೆ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದರು. ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮ ಮುಗಿದ ಎರಡೇ ದಿನಕ್ಕೆ ಶ್ರೀಗಳಿಗೆ ಪಾಸಿಟಿವ್​ ಕಾಣಿಸಿಕೊಂಡಿರುವ ಕಾರಣ ನಟ ಸುದೀಪ್​ಗೂ ಕೊರೊನಾ ತಗುಲಿರಬಹುದಾ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು 

ಸಿಎಂಗಳಿಗೆ ಪಿಎಂ ಕೊಟ್ಟ 5 ಟಿಪ್ಸ್​: ಕೊರೊನಾ ಸೋಂಕು ತಡೆಗೆ ರಾಜ್ಯಗಳಿಗೆ ನರೇಂದ್ರ ಮೋದಿ ಕೊಟ್ಟ ಮುಖ್ಯ ಸಲಹೆಗಳಿವು

(Melanagavi Mutt Swamiji tested positive for Corona Kichcha Sudeep was in primary contact 5 days before)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!