ನೆಲಮಂಗಲ: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನೆಲಮಂಗಲ ತಾಲ್ಲೂಕು ಶಿವಗಂಗೆಯ ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ನಡೆದಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಶ್ರೀಗಳು ಪಾಲ್ಗೊಂಡಿದ್ದು, ಇದೀಗ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಸಾವಿರಾರು ಜನ ಸೇರಿದ್ದ ಕಾರ್ಯಕ್ರಮ ನೆರವೇರಿದ ಎರಡು ದಿನಗಳ ನಂತರ ಅಂದರೆ ಏಪ್ರಿಲ್ 6ಕ್ಕೆ ಮೇಲಣಗವಿ ಮಠದ ಪೀಠಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಶ್ರೀಗಳಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಹೋಂ ಐಸೋಲೇಷನ್ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ.
ಕಿಚ್ಚ ಸುದೀಪ್ಗೂ ಕೊರೊನಾ ಭಯ?
ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೂ ಆತಂಕ ಶುರುವಾಗಿದೆ. ಏಪ್ರಿಲ್ 4 ರಂದು ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ಗೆ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದರು. ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮ ಮುಗಿದ ಎರಡೇ ದಿನಕ್ಕೆ ಶ್ರೀಗಳಿಗೆ ಪಾಸಿಟಿವ್ ಕಾಣಿಸಿಕೊಂಡಿರುವ ಕಾರಣ ನಟ ಸುದೀಪ್ಗೂ ಕೊರೊನಾ ತಗುಲಿರಬಹುದಾ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು
ಸಿಎಂಗಳಿಗೆ ಪಿಎಂ ಕೊಟ್ಟ 5 ಟಿಪ್ಸ್: ಕೊರೊನಾ ಸೋಂಕು ತಡೆಗೆ ರಾಜ್ಯಗಳಿಗೆ ನರೇಂದ್ರ ಮೋದಿ ಕೊಟ್ಟ ಮುಖ್ಯ ಸಲಹೆಗಳಿವು
(Melanagavi Mutt Swamiji tested positive for Corona Kichcha Sudeep was in primary contact 5 days before)