AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ
ಷಡಕ್ಷರಿಮುನಿ ಸ್ವಾಮೀಜಿ
KUSHAL V
|

Updated on:Mar 07, 2021 | 5:29 PM

Share

ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾ.25ರಿಂದ ಮಾದಿಗ ಸಮುದಾಯದಿಂದ ಬೃಹತ್​ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು, ನಗರದಲ್ಲಿ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೋಡಿಹಳ್ಳಿ ಮಠದ ಶ್ರೀಗಳಾದ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

DVG SWAMIJI PROTEST 2

ಪಾದಯಾತ್ರೆಯ ಕುರಿತು ಚರ್ಚೆಗೆ ಮುಂದಾರ ಮಾದಿಗ ಸಮುದಾಯದ ಮುಖಂಡರು

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 3

ಚರ್ಚೆಯಲ್ಲಿ ಭಾಗಿಯಾದ ಮಾದಿಗ ಸಮುದಾಯದ ಸದಸ್ಯರು

ಹಾಗಾಗಿ, ಮಾ.25ರಿಂದ ಮಾದಿಗ ಸಮುದಾಯದ ಸದಸ್ಯರು ಬೃಹತ್​ ಪಾದಯಾತ್ರೆಯನ್ನು ಆಯೋಜಿಸಿದ್ದಾರೆ. ಹನಗವಾಡಿ ಬಳಿಯಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ 280 ಕಿ.ಮೀ ಪಾದಯಾತ್ರೆ ನಡೆಸಿ ಸಮಾವೇಶ ನಡೆಸಲಾಗುವುದು. ಬೆಂಗಳೂರಿನಲ್ಲಿ ಮಾದಿಗರ ಬೃಹತ್​ ಸಮಾವೇಶ ಮಾಡಿ ಮನವಿ ಸಲ್ಲಿಸಲಾಗುವುದು. ಸಿಎಂ B.S.ಯಡಿಯೂರಪ್ಪಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ವಾಮೀಜಿಗಳು ತಿಳಿಸಿದರು.

DVG SWAMIJI PROTEST 6

ಮೈತ್ರಿವನ

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಲ್ಲಿ ಮಾದಿಗರು ಕನಿಷ್ಠ ಮಟ್ಟದ ಜೀವನ ನಡೆಸುತ್ತಿದ್ದಾರೆ. ಈ ಸಮಾಜಕ್ಕೆ ನ್ಯಾಯ ಒದಗಿಸಲು ಇದೇ 25 ರಂದು ಜಿಲ್ಲೆಯ ಹರಿಹರದ ಹನಗವಾಡಿ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 5

ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನ

ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳ

DVG SWAMIJI PROTEST 4

ಷಡಕ್ಷರಿಮುನಿ ಸ್ವಾಮೀಜಿ

ಇದನ್ನೂ ಓದಿ: ಆನ್​ಲೈನ್ ಕ್ಲಾಸ್ ತಂದ ಅವಾಂತರ: ವಿದ್ಯಾರ್ಥಿಗಳ ಆರೋಗ್ಯಕ್ಕೆ ಮಾರಕವಾಗ್ತಿದ್ಯಾ ಆನ್​ಲೈನ್​​ ಪಾಠ?

Published On - 5:28 pm, Sun, 7 March 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ