
ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾ.25ರಿಂದ ಮಾದಿಗ ಸಮುದಾಯದಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು, ನಗರದಲ್ಲಿ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೋಡಿಹಳ್ಳಿ ಮಠದ ಶ್ರೀಗಳಾದ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಪಾದಯಾತ್ರೆಯ ಕುರಿತು ಚರ್ಚೆಗೆ ಮುಂದಾರ ಮಾದಿಗ ಸಮುದಾಯದ ಮುಖಂಡರು
ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.
ಚರ್ಚೆಯಲ್ಲಿ ಭಾಗಿಯಾದ ಮಾದಿಗ ಸಮುದಾಯದ ಸದಸ್ಯರು
ಹಾಗಾಗಿ, ಮಾ.25ರಿಂದ ಮಾದಿಗ ಸಮುದಾಯದ ಸದಸ್ಯರು ಬೃಹತ್ ಪಾದಯಾತ್ರೆಯನ್ನು ಆಯೋಜಿಸಿದ್ದಾರೆ. ಹನಗವಾಡಿ ಬಳಿಯಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ 280 ಕಿ.ಮೀ ಪಾದಯಾತ್ರೆ ನಡೆಸಿ ಸಮಾವೇಶ ನಡೆಸಲಾಗುವುದು. ಬೆಂಗಳೂರಿನಲ್ಲಿ ಮಾದಿಗರ ಬೃಹತ್ ಸಮಾವೇಶ ಮಾಡಿ ಮನವಿ ಸಲ್ಲಿಸಲಾಗುವುದು. ಸಿಎಂ B.S.ಯಡಿಯೂರಪ್ಪಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ವಾಮೀಜಿಗಳು ತಿಳಿಸಿದರು.
ಮೈತ್ರಿವನ
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಲ್ಲಿ ಮಾದಿಗರು ಕನಿಷ್ಠ ಮಟ್ಟದ ಜೀವನ ನಡೆಸುತ್ತಿದ್ದಾರೆ. ಈ ಸಮಾಜಕ್ಕೆ ನ್ಯಾಯ ಒದಗಿಸಲು ಇದೇ 25 ರಂದು ಜಿಲ್ಲೆಯ ಹರಿಹರದ ಹನಗವಾಡಿ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ ಎಂದು ಶ್ರೀಗಳು ಹೇಳಿದರು.
ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನ
ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳ
ಷಡಕ್ಷರಿಮುನಿ ಸ್ವಾಮೀಜಿ
ಇದನ್ನೂ ಓದಿ: ಆನ್ಲೈನ್ ಕ್ಲಾಸ್ ತಂದ ಅವಾಂತರ: ವಿದ್ಯಾರ್ಥಿಗಳ ಆರೋಗ್ಯಕ್ಕೆ ಮಾರಕವಾಗ್ತಿದ್ಯಾ ಆನ್ಲೈನ್ ಪಾಠ?
Published On - 5:28 pm, Sun, 7 March 21