ಎಂಇಎಸ್ ಬ್ಯಾನ್ ವಿಚಾರ: ವರ್ಷದ ಕೊನೆಯ ದಿನ ಕರ್ನಾಟಕ ಬಂದ್ ಆಗುತ್ತದಾ? ವಾಟಾಳ್ ನಾಗರಾಜ್ ಇಂದು ಸಭೆ

ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

TV9kannada Web Team

| Edited By: Ayesha Banu

Dec 22, 2021 | 1:21 PM

ಬೆಂಗಳೂರು: ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್​ಗೆ ನಿರ್ಧಾರ? ಮಾಡಲಾಗಿದೆ. ಕನ್ನಡಪರ ಸಂಘಟನೆಗಳಿಂದ ಟಿವಿ9ಗೆ ಮಾಹಿತಿ ಸಿಕ್ಕಿದೆ. ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ನಿರ್ಧಾರ ಮಾಡಿವೆ. ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಡಿಸೆಂಬರ್ 31 ರಂದು ಕರ್ನಾಟಕ ಬಂದ್​ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುತ್ತೆ.

ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್
ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

ಕರ್ನಾಟಕ ಬಂದ್‌ ಬೆಂಬಲ ನೀಡಲಿರುವ ಕನ್ನಡಪರ ಸಂಘಟನೆಗಳು
ಸುಮಾರು 35 ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸಿಗುವ ಸಾಧ್ಯತೆ ಇದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ.

Follow us on

Click on your DTH Provider to Add TV9 Kannada