ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ
Bengaluru Rains: ಬೆಂಗಳೂರಿನಲ್ಲಿ ಇಂದು (ಮೇ 21) ಸಂಜೆ ಭಾರಿ ಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆ ಇಡೀ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಗರದ ರಸ್ತೆಗಳ ಮೇಲೆ ನೀರು ತುಂಬಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿದ್ದರೆ, ಹಲವಡೆ ಮರಳು ಬಿದ್ದಿವೆ. ಇನ್ನು ಭಾರಿ ಗಾಳಿ ಮಳೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್‌ಸಿಎಲ್ (BMRCL) ವಿಶೇಷ ಮನವಿ ಮಾಡಿಕೊಂಡಿದೆ.
ಮುಖ್ಯಾಂಶಗಳು
- ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
- ಇಂದು ಸಂಜೆ ಸುರಿದ ಮಳೆಗೆ ಎಲ್ಲಾ ಮೆಟ್ರೋ ಮಾರ್ಗಗಳ ರೈಲು ಸಂಚಾರದಲ್ಲಿ ವ್ಯತ್ಯಯ
- ಅನಾನುಕೂಲತೆಗೆ ವಿಷಾದಿಸ್ತೇವೆ ಎಂದ ಬಿಎಂಆರ್‌ಸಿಎಲ್
ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ
ಘಟನೆಗೆ ಸಂಬಂಧಿಸಿದಂತೆ ತುರ್ತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, ಭಾರೀ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ. ಸುರಕ್ಷಿತವಾಗಿ ರೈಲುಗಳನ್ನು ಕಾರ್ಯಾಚರಣೆ ಮಾಡಬೇಕಿರುವುದರಿಂದ ವೇಳಾಪಟ್ಟಿಯಲ್ಲಿ ಕೊಂಚ ಏರುಪೇರಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೆ ಸಾರ್ವಜನಿಕರು ಮತ್ತು ಪ್ರಯಾಣಿಕರು ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಿದೆ.
🚇 ಸಾರ್ವಜನಿಕ ಮಾಹಿತಿಗಾಗಿ ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರ ಸಹಕಾರವನ್ನು ಕೋರಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ. @srivasrbmrccoi1
— ನಮ್ಮ ಮೆಟ್ರೋ (@OfficialBMRCL) May 21, 2026
ಮೇ 24ರಂದು 1 ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ
ಇನ್ನು ಇದೇ ಮೇ 24ರಂದು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿಯೇ ನಮ್ಮ ಮೆಟ್ರೋ ಸೇವೆ ಇರಲಿದೆ. ಭಾನುವಾರ ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳ್ಳಿಗ್ಗೆ 7 ಗಂಟೆ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ಕಾರ್ಯಾಚರಣೆ ಪ್ರಾರಂಭವಾಗಿದೆ.
Early Commencement of Metro Services for UPSC Civil Services Preliminary Examination on 24.05.2026. / ಯು ಪಿ ಎಸ್ ಸಿಯ ಸಿವಿಲ್ ಸರ್ವೀಸ್ (ಪ್ರಾಥಮಿಕ) ಪರೀಕ್ಷೆ ಹಿನ್ನಲೆಯಲ್ಲಿ ಮೆಟ್ರೋ ಸೇವೆಗಳು ಮುಂಚಿತವಾಗಿ ಆರಂಭ. ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆಯನ್ನು ವೀಕ್ಷಿಸಿ pic.twitter.com/3cDdRxepLD
— ನಮ್ಮ ಮೆಟ್ರೋ (@OfficialBMRCL) May 21, 2026
ನೇರಳೆ ಮಾರ್ಗದ ವೈಟ್ ಫೀಲ್ಡ್ ಟು ಚೆಲ್ಲಘಟ್ಟ, ಹಸಿರು ಮಾರ್ಗದ ಮಾದವಾರ ಟು ಚೆಲ್ಲಘಟ್ಟ, ಹಳದಿ ಮಾರ್ಗದ ಆರ್ ವಿ ರೋಡ್ ಟು ಬೊಮ್ಮಸಂದ್ರ ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಭಾನುವಾರ ಆರು ಗಂಟೆಯಿಂದಲೇ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ.

