ನಮ್ಮ ಮೆಟ್ರೋ ಹಂತ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಕಾಮಗಾರಿ ಪ್ರಾರಂಭಿಸಲು ಸಿದ್ಧವಾಗಿದೆ. 58 ಕಿ.ಮೀ. ಮೆಟ್ರೋ ಮಾರ್ಗವನ್ನು 5 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಮೆಟ್ರೋ ರೈಲು ನಿಗಮ ಯೋಜನೆ ಹಾಕಿಕೊಂಡಿದೆ.
ಬೆಂಗಳೂರು: ನಮ್ಮ ಮೆಟ್ರೋ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ ನಡೆಸಿದೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್, ಸಿಎಂ ಎಸಿಎಸ್ ಡಾ. ರಮಣ ರೆಡ್ಡಿ, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಹಂತ 2ಎ ಮೆಟ್ರೋ ಯೋಜನೆಯು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರಂವರೆಗೆ 20 ಕಿ.ಮೀ. ಮತ್ತು ಹಂತ 2ಬಿ ಮೆಟ್ರೋ ಯೋಜನೆಯು ಕೆ.ಆರ್. ಪುರಂನಿಂದ ಹೆಬ್ಬಾಳ ಮೂಲಕ ವಿಮಾನ ನಿಲ್ದಾಣ ಟರ್ಮಿನಲ್‌ವರೆಗೆ 38 ಕಿ.ಮೀ. ಅಂದರೆ ಒಟ್ಟು 58 ಕಿ.ಮೀ. ಮೆಟ್ರೋ ಯೋಜನೆ ಇದಾಗಿರಲಿದೆ. ಯೋಜನೆಯು 30 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿರುತ್ತದೆ.
ಈ ಯೋಜನೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಹೆಬ್ಬಾಳದವರೆಗಿನ ಐಟಿ ಇಂಡಸ್ಟ್ರಿ ಉದ್ಯೋಗಿಗಳಿಗೆ, ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಹೆಚ್ಚಿನ ಸಹಾಯವಾಗಲಿದೆ. ಈ ಯೋಜನೆಗೆ ಕರ್ನಾಟಕ ರಾಜ್ಯ ಸರ್ಕಾರವು ಜನವರಿ 2019ರಲ್ಲಿ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರವು 2021 ಏಪ್ರಿಲ್ 28ರಂದು 14,788 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಕಾಮಗಾರಿ ಪ್ರಾರಂಭಿಸಲು ಸಿದ್ಧವಾಗಿದೆ. 58 ಕಿ.ಮೀ. ಮೆಟ್ರೋ ಮಾರ್ಗವನ್ನು 5 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಮೆಟ್ರೋ ರೈಲು ನಿಗಮ ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ
ಬೆಡ್ ಸಿಕ್ಕಿಲ್ಲ.. ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್ನಲ್ಲೇ ಚಿಕಿತ್ಸೆ | ಅಧಿಕಾರಿಗಳೇ ಇತ್ತ ನೋಡಿ..!
Published On - 9:02 pm, Mon, 10 May 21