AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮಿಚಾಂಗ್ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದ 21ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಮಿಚಾಂಗ್ ಚಂಡಮಾರುತವು ತಮಿಳುನಾಡಿನಲ್ಲಿ ಭಾರಿ ಅನಾಹುತವನ್ನು ಸೃಷ್ಟಿಸುತ್ತಿದ್ದು ಇದರ ಪ್ರಭಾವ ಕರ್ನಾಟಕದ ಮೇಲೂ ಆಗಲಿದೆ ಎನ್ನಲಾಗಿದೆ. ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಳೆImage Credit source: Indian Express
Follow us
ನಯನಾ ರಾಜೀವ್
|

Updated on:Dec 05, 2023 | 7:33 AM

ಮಿಚಾಂಗ್ ಚಂಡಮಾರುತವು ತಮಿಳುನಾಡಿನಲ್ಲಿ ಭಾರಿ ಅನಾಹುತವನ್ನು ಸೃಷ್ಟಿಸುತ್ತಿದ್ದು ಇದರ ಪ್ರಭಾವ ಕರ್ನಾಟಕದ ಮೇಲೂ ಆಗಲಿದೆ ಎನ್ನಲಾಗಿದೆ. ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Rain: ಚಂಡಮಾರುತ ಪ್ರಭಾವ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆ

ತಮಿಳುನಾಡಿನ ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ರಾಣಿಪೇಟ್ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಿರುಪತ್ತೂರ್, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ಕನ್ಯಾಕುಮಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿಯೂ ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:32 am, Tue, 5 December 23

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?

ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ