ಮಿಚಾಂಗ್ ಚಂಡಮಾರುತವು ತಮಿಳುನಾಡಿನಲ್ಲಿ ಭಾರಿ ಅನಾಹುತವನ್ನು ಸೃಷ್ಟಿಸುತ್ತಿದ್ದು ಇದರ ಪ್ರಭಾವ ಕರ್ನಾಟಕದ ಮೇಲೂ ಆಗಲಿದೆ ಎನ್ನಲಾಗಿದೆ. ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ:Karnataka Rain: ಚಂಡಮಾರುತ ಪ್ರಭಾವ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆ
ತಮಿಳುನಾಡಿನ ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ರಾಣಿಪೇಟ್ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಿರುಪತ್ತೂರ್, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ಕನ್ಯಾಕುಮಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿಯೂ ಮಳೆಯಾಗಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:32 am, Tue, 5 December 23