ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Feb 05, 2025 | 4:31 PM

ಬೆಂಗಳೂರು, ಫೆಬ್ರವರಿ 05: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Micro finance) ಕಿರುಕುಳಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ಊರುಗಳನ್ನೇ ತೊರೆಯುತ್ತಿದ್ದಾರೆ. ಫೈನಾನ್ಸ್ ಹಾವಳಿಗೆ ಅಂಕುಶ ಹಾಕಲು ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗೆ ಸುಗ್ರೀವಾಜ್ಞೆ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಇದೀಗ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಲಾಗಿದೆ.

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ 2025 ಎಂದು ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊಸ್ತಿಲಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಮೈಕ್ರೋಫೈನಾನ್ಸ್ ಕಂಪನಿಗಳು

ಮೈಕ್ರೋ ಫೈನಾನ್ಸ್​ಗಳು ಆರ್​ಬಿಐ ಅಡಿಯಲ್ಲಿ ನೋಂದಣಿ ಆಗಿರುತ್ತವೆ. ಜೊತೆಗೆ ಕಾನೂನು ಕ್ರಮ ಜರುಗಿಸುವುದಕ್ಕೆ ಕಷ್ಟವಾಗುತ್ತೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ.

ಸರ್ಕಾರ ಸಾಲಗಾರನ ರಕ್ಷಣೆಗಾಗಿ ಸುಗ್ರೀವಾಜ್ಞೆಯ ರಕ್ಷಾ ಕವಚ ರಚನೆ ಮಾಡಿದೆ. ಬಡ್ಡಿ ದಂಧೆ, ಫೈನಾನ್ಸ್ ಸಿಬ್ಬಂದಿಯನ್ನ ಕಟ್ಟಿಹಾಕಲು ಕಠಿಣ ಕಾನೂನುಗಳನ್ನೇ ಅಳವಡಿಸಿ ಸುಗ್ರೀವಾಜ್ಞೆಯನ್ನ ರಾಜ್ಯಪಾಲರ ಅಂಗಳಕ್ಕೆ ಕಳಿಸಿಕೊಟ್ಟಿದೆ. ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿಯೊಂದೇ ಬಾಕಿ ಇದೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆ ಡ್ರಾಫ್ಟ್​ ರಾಜ್ಯಪಾಲರಿಗೆ ರವಾನೆ: ಜೈಲು ಶಿಕ್ಷೆಯಲ್ಲಿ ಬದಲಾವಣೆ

ಪ್ರಸ್ತಾವಿತ ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ ಜೈಲು ಶಿಕ್ಷೆಯನ್ನು 3 ವರ್ಷ ಇದ್ದದ್ದನ್ನು 10 ವರ್ಷಕ್ಕೆ ಹೆಚ್ಚಿಸಲಾಗಿದೆ. ದಂಡವನ್ನು 5 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಕ್ಷೆ ಪ್ರಮಾಣ ಹೆಚ್ಚಿಸಲು ಶಿಫಾರಸು ಮಾಡಿದ್ದು, ಕಠಿಣ ಕ್ರಮದ ನಿರೀಕ್ಷೆ ಹೆಚ್ಚಾಗಿದೆ.

ಷರತ್ತುಗಳು ಮೀರಿದರೆ ಏನಾಗುತ್ತೆ?

ಸುಗ್ರೀವಾಜ್ಞೆಯ ಕಾನೂನು ಮೀರಿದರೆ 10 ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ ವಿಧಿಸಲಾಗುತ್ತೆ. ನೋಂದಣಿ ಆಗದ ಸಂಸ್ಥೆಗಳು ನೀಡುವ ಸಾಲ ಮತ್ತು ಬಡ್ಡಿ ಮನ್ನಾ ಆಗಲಿದೆ. ಸಾಲಗಾರರ ವಿರುದ್ಧ ಯಾವುದೇ ಸಿವಿಲ್ ಕೋರ್ಟ್​ನಲ್ಲಿ ಕೇಸ್ ದಾಖಲಿಸಬಹುದು. ಕಿರುಕುಳ ಸಂಬಂಧ ಪೊಲೀಸ್ ಠಾಣೆಗೆ ದೂರುಕೊಡ್ಬೋದು. DYSP ಶ್ರೇಣಿಗಿಂತ ಮೇಲಿನ ಅಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬಹುದು. ವಿವಾದಗಳನ್ನು ಇತ್ಯರ್ಥಪಡಿಸಲು ಒಂಬುಡ್ಸ್​ಮೆನ್ ನೇಮಕಕ್ಕೂ ಅವಕಾಶ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:24 pm, Wed, 5 February 25

ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಬೆಂಗಳೂರು ಏರ್​ ಶೋ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್​​
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಏರ್ ಶೋಗೆ ವೀಕ್ಷಿಸಲು ತೆರಳಿರುವವರು ಟ್ರಾಫಿಕ್ ನಿರ್ಬಂಧಗಳನ್ನು ಗಮನಿಸಿ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
ಯುವಜನಾಂಗದಲ್ಲಿ ಜಾತ್ರೆ, ಊರಹಬ್ಬಗಳ ಮೇಲಿನ ಆಸಕ್ತಿ ಕಮ್ಮಿಯಾಗುತ್ತಿದೆ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ
Aero India 2025: ಬೆಂಗಳೂರು ಏರ್​ ಶೋ ಲೈವ್​, ಲೋಹದ ಹಕ್ಕಿಗಳ ಚಮತ್ಕಾರ