ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಮೈಕ್ರೋಸಾಫ್ಟ್​ನ ‘ಕ್ಲೌಡ್​’ ಸರ್ವಿಸ್​ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಹೀಗಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮ್ಯಾನುವಲ್ ಚೆಕ್ ಇನ್​​ಗೆ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
ಮೈಕ್ರೋಸಾಫ್ಟ್​ನ ‘ಕ್ಲೌಡ್​’ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2024 | 3:03 PM

ಮಂಗಳೂರು, ಜುಲೈ 19: ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ (Microsoft’s cloud service, problem) ಉಂಟಾದ ಹಿನ್ನೆಲೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಬೆಂಗಳೂರಿನ ಕೆಂಪೇಗೌಡ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ತಾತ್ಕಾಲಿಕವಾಗಿ ಬುಕಿಂಗ್, ಚೆಕ್​​ ಇನ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಸ್ಪೆಸ್ ಜೆಟ್, ಇಂಡಿಗೋ ಸಂಸ್ಥೆಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಿದೆ.

ಆರೋಗ್ಯ ವ್ಯವಸ್ಥೆಗಳು ಸೇರಿದಂತೆ ಹಲವು ಭಾಗಗಳಲ್ಲಿ ತುರ್ತು ಸೇವೆಗಳು ಅಸ್ತವ್ಯಸ್ತವಾಗಿದೆ. ಯುರೋಪ್​ನ ಬಹುತೇಕ ಏರ್​​ಲೈನ್ ಕಂಪನಿಗಳಲ್ಲಿ ಸಮಸ್ಯೆ ಉಂಟಾಗಿದ್ದು, ಐಟಿ ವಲಯದಲ್ಲಿ ಟೆಕ್ಕಿಗಳು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಬೇಗ ಬರುವಂತೆ ಏರ್​​ಪೋರ್ಟ್​ ಅಧಿಕಾರಿಗಳು ಸೂಚನೆ

ಇತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು, ವಿಮಾನ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮ್ಯಾನುವಲ್ ಚೆಕ್ ಇನ್​ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ಟ್ವೀಟ್​

ಬೆಂಗಳೂರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಕೂಡ ಪ್ರಯಾಣಿಕರು ಪರದಾಡಿದ್ದು, ಕಳೆದ ನಾಲ್ಕು ಗಂಟೆಗಳಿಂದ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ತೊಂದರೆ ಉಂಟಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು