ಮಂಗಳೂರು, ಜುಲೈ 19: ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್ನಲ್ಲಿ ತಾಂತ್ರಿಕ ಸಮಸ್ಯೆ (Microsoft’s cloud service, problem) ಉಂಟಾದ ಹಿನ್ನೆಲೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಬೆಂಗಳೂರಿನ ಕೆಂಪೇಗೌಡ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ತಾತ್ಕಾಲಿಕವಾಗಿ ಬುಕಿಂಗ್, ಚೆಕ್ ಇನ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಸ್ಪೆಸ್ ಜೆಟ್, ಇಂಡಿಗೋ ಸಂಸ್ಥೆಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಿದೆ.
ಆರೋಗ್ಯ ವ್ಯವಸ್ಥೆಗಳು ಸೇರಿದಂತೆ ಹಲವು ಭಾಗಗಳಲ್ಲಿ ತುರ್ತು ಸೇವೆಗಳು ಅಸ್ತವ್ಯಸ್ತವಾಗಿದೆ. ಯುರೋಪ್ನ ಬಹುತೇಕ ಏರ್ಲೈನ್ ಕಂಪನಿಗಳಲ್ಲಿ ಸಮಸ್ಯೆ ಉಂಟಾಗಿದ್ದು, ಐಟಿ ವಲಯದಲ್ಲಿ ಟೆಕ್ಕಿಗಳು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ.
ಇತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು, ವಿಮಾನ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮ್ಯಾನುವಲ್ ಚೆಕ್ ಇನ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ
ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿದ್ದಾರೆ.
#PassengerAdvisory #MangaluruAirport pic.twitter.com/9V7YcLxmqK
— Mangaluru Airport (@mlrairport) July 19, 2024
ಬೆಂಗಳೂರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಲ್ಲಿ ಕೂಡ ಪ್ರಯಾಣಿಕರು ಪರದಾಡಿದ್ದು, ಕಳೆದ ನಾಲ್ಕು ಗಂಟೆಗಳಿಂದ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ತೊಂದರೆ ಉಂಟಾಗಿದೆ.
We’re investigating an issue impacting users ability to access various Microsoft 365 apps and services. More info posted in the admin center under MO821132 and on https://t.co/W5Y8dAkjMk
— Microsoft 365 Status (@MSFT365Status) July 18, 2024
ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.