ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್

ನೀರು ಮಿಶ್ರಿತ ಹಾಲು ಬರುವಂತೆ ಟ್ಯಾಂಕರ್ ವಿನ್ಯಾಸಗೊಳಿಸಿ ಟ್ಯಾಂಕರ್ ಒಳಭಾಗದಲ್ಲಿ ನೀರು ತುಂಬಲು ಪ್ರತ್ಯೇಕ ವಿಭಾಗ ರೂಪಿಸಿದ್ದರು. ಅನುಮಾನಗೊಂಡು ಒಕ್ಕೂಟದ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ತಪಾಸಣೆ ನಡೆಸಿದಾಗ ಜಾಲ ಬಯಲಾಗಿದ್ದು, ವಂಚನೆ ನಡೆಸಲು ಬಳಸಿದ ವಿಧಾನಕ್ಕೆ ಆಡಳಿತ ಮಂಡಳಿ ದಂಗಾಗಿದೆ.

ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್
ಹಾಲಿಗೆ ನೀರು ಬೆರೆಸಲು ಉಪಯೋಗಿಸುತ್ತಿದ್ದ ವಾಹನ
Follow us
guruganesh bhat
|

Updated on: May 31, 2021 | 3:56 PM

ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ.

ನೀರು ಮಿಶ್ರಿತ ಹಾಲು ಬರುವಂತೆ ಟ್ಯಾಂಕರ್ ವಿನ್ಯಾಸಗೊಳಿಸಿ ಟ್ಯಾಂಕರ್ ಒಳಭಾಗದಲ್ಲಿ ನೀರು ತುಂಬಲು ಪ್ರತ್ಯೇಕ ವಿಭಾಗ ರೂಪಿಸಿದ್ದರು. ಅನುಮಾನಗೊಂಡು ಒಕ್ಕೂಟದ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ತಪಾಸಣೆ ನಡೆಸಿದಾಗ ಜಾಲ ಬಯಲಾಗಿದ್ದು, ವಂಚನೆ ನಡೆಸಲು ಬಳಸಿದ ವಿಧಾನಕ್ಕೆ ಆಡಳಿತ ಮಂಡಳಿ ದಂಗಾಗಿದೆ. ಸದ್ಯ 6 ಟ್ಯಾಂಕರ್​ಗಳನ್ನು ವಶಕ್ಕೆ ಪಡೆದ ಮದ್ದೂರು ಪೊಲೀಸರಿಂದ ತನಿಖೆ ಆರಂಭಿಸಿದ್ದಾರೆ.

ನಮ್ಮ ಹಾಲು ಒಕ್ಕೂಟಕ್ಕೆ ಜಿಲ್ಲೆಯ ಹಳ್ಳಿಗಳಿಂದ ಸಂಗ್ರಹಿಸಿ ತರಲಾಗುತ್ತಿದ್ದ ಹಾಲಿನ ಟ್ಯಾಂಕರ್ ಗಳ ಪೈಕಿ ಕೆಲವು ಮಾರ್ಗಗಳಿಂದ ಬರುವ ಟ್ಯಾಂಕರ್ ಗಳಲ್ಲಿನ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿತ್ತು. ಲಾಕ್ ಡೌನ್ ಸಮಯದಲ್ಲಿ ಅದು ಹೆಚ್ಚಾಗತೊಡಗಿತ್ತು. ಈ ಬಗ್ಗೆ ಒಂದು ತಿಂಗಳಿನಿಂದ ಪರಿಶೀಲನೆ ನಡೆಸಿದಾಗ ಹಗರಣ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಟಿವಿ9ಗೆ ತಿಳಿಸಿದ್ದಾರೆ.

ಗೆಜ್ಜಲಗೆರೆ ಡೈರಿಯಲ್ಲಿ ಹಾಲಿಗೆ ನೀರು ಸೇರಿಸಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವ ನಾರಾಯಣಗೌಡ ಡೈರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಕ್ಕೂಟದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಲ್ಲರ ಸಮ್ಮುಖದಲ್ಲಿ ಹಾಲು ಸಾಗಿಸುವ ವಾಹನದಲ್ಲಿ ನೀರು ಮಿಕ್ಸ್ ಮಾಡುತ್ತಿದ್ದ ಬಗೆಯನ್ನು ಸಚಿವ ನಾರಾಯಣಗೌಡ ವೀಕ್ಷಿಸಿದರು.

ಇಷ್ಟೊಂದು ದೊಡ್ಡ ಪ್ರಮಾಣದ ಹಗರಣ ನಡೆದಿರೋದು ಅಚ್ಚರಿ ತಂದಿದೆ. ಇದರ ಹಿಂದೆ ಇರುವವರನ್ನು ತನಿಖೆಯ ಮೂಲಕ ಬಯಲಿಗೆಳೆಯಬೇಕಿದೆ ಎಂದ ಸಚಿವ ನಾರಾಯಣಗೌಡ ಪ್ರಕರಣ ಬಯಲಿಗೆ ತಂದ ಆಡಳಿತಮಂಡಳಿಗೆ ಅಭಿನಂದನೆ ಸಲ್ಲಿಸಿದರು. ಜತೆಗೆ ಘಟನೆಯಿಂದ ಯಾರಿಗಾದರೂ ಬೆದರಿಕೆ ಇದ್ದರೆ ಡೈರಿಯಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ:ಡಿಜಿಟಲ್ ಡಿವೈಡ್ ಇರುವ ದೇಶದಲ್ಲಿ ಲಸಿಕೆ ಪಡೆಯಲು ಕೊವಿನ್ ಪೋರ್ಟಲ್​ನಲ್ಲಿ ಕಡ್ಢಾಯ ನೋಂದಣಿ ಹೇಗೆ ಸಾಧ್ಯ? ಸುಪ್ರೀಂಕೋರ್ಟ್

ಕೊವಿಡ್​ ಮತ್ತೆ ಆವರಿಸಿದೆ ಚೀನಾದಲ್ಲಿ; ಲಸಿಕೆ ಪಡೆಯಲು ಜನ ಪರದಾಟ; ಹೊಸ ಕೇಸ್​ ಪತ್ತೆಯಾಗುತ್ತಿದ್ದಂತೆ ವಿಮಾನ ಹಾರಾಟ ರದ್ದು

(Milk and water mixture golmaal by contractor found in Mandya district maddur)