AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿ; 1 ಸಾವಿರ ಲೀಟರ್ ಹಾಲು ರಸ್ತೆ ಪಾಲು

ಹಳಿಯಾಳದಿಂದ ಧಾರವಾಡಕ್ಕೆ ಬಂದಿದ್ದ ಹಾಲಿನ ವಾಹನ ಇದಾಗಿದ್ದು, ಜೆ.ಎಸ್.ಎಸ್. ಕಾಲೇಜಿನ ಎದುರು ಬೀದಿ ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿ; 1 ಸಾವಿರ ಲೀಟರ್ ಹಾಲು ರಸ್ತೆ ಪಾಲು
ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಹಾಲಿನ ವಾಹನ ಪಲ್ಟಿ
preethi shettigar
|

Updated on: May 25, 2021 | 8:40 AM

Share

ಧಾರವಾಡ: ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಹಾಲಿನ ವಾಹನ ಪಲ್ಟಿಯಾದ ಘಟನೆ ಧಾರವಾಡ ನಗರದ ವಿದ್ಯಾಗಿರಿ ಬಡಾವಣೆಯಲ್ಲಿ ನಡೆದಿದೆ. ಕೆಎಂಎಫ್‌ಗೆ ಹಾಲು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಸುಮಾರು 1 ಸಾವಿರ ಲೀಟರ್ ಹಾಲು ರಸ್ತೆ ಪಾಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಹಳಿಯಾಳದಿಂದ ಧಾರವಾಡಕ್ಕೆ ಬಂದಿದ್ದ ಹಾಲಿನ ವಾಹನ ಇದಾಗಿದ್ದು, ಜೆ.ಎಸ್.ಎಸ್. ಕಾಲೇಜಿನ ಎದುರು ಬೀದಿ ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲಿ ವಾಹನ ಓಡಾಡುವಾಗ ಅಡ್ಡ ಬಂದು ಅವಾಂತರಕ್ಕೆ ಕಾರಣವಾದ ಅದೇಷ್ಟೋ ಘಟನೆಗಳು ಈ ಹಿಂದೆ ಕೂಡ ನಡೆದಿದೆ.

ಅಡ್ಡ ಬಂದ ನಾಯಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಲಗಟ್ಟ ಗ್ರಾಮದ ಬಳಿ ಆಟೋ ಪಲ್ಟಿಯಾಗಿ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಮರಿಕುಂಟೆ ಗ್ರಾಮದ ಚಾಲಕ ಶಶಿ (23) ಮೃತ ದುರ್ದೈವಿ. ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದೆ.

ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು ನಾಯಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿತ್ತು. ನಿಗದಿ ಗ್ರಾಮದ ಗಿರಿಶಾದ್ ಚಪ್ಪರಾರ್(43) ಮೃತಪಟ್ಟಿದ್ದು, ಕೂಲಿ ಕೆಲಸಕ್ಕೆಂದು ಧಾರವಾಡಕ್ಕೆ ಹೊರಟ್ಟಿದ್ದ ಮಹಿಳೆ ಪ್ರಕಾಶ್ ಎಂಬುವವ ಬೈಕ್​​ನಲ್ಲಿ ಡ್ರಾಪ್ ಕೇಳಿದ್ದರು. ಅದಕ್ಕೆ ಒಪ್ಪಿದ ಪ್ರಕಾಶ್ ಆಕೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗುವಾಗ ಬೈಕ್​ಗೆ ನಾಯಿ ಅಡ್ಡ ಬಂದಿದೆ. ಈ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನು, ನಾಯಿ ಕೂಡ ಸಾವನ್ನಪ್ಪಿದ್ದು, ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

ದುರ್ವಿಧಿ.. ಅಡ್ಡ ಬಂದ ನಾಯಿಗೆ ಬೈಕ್​ ಡಿಕ್ಕಿ: ಡ್ರಾಪ್ ತೆಗೆದುಕೊಂಡಿದ್ದ ಮಹಿಳೆಯೂ ಸಾವು, ನಾಯಿನೂ ಸಾವು

Follow Us
preethi shettigar
preethi shettigar
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ