ಮದುವೆಗೆ ಹೊರಟ್ಟಿದ್ದ ಮಿನಿ ಬಸ್ ಪಲ್ಟಿ: ಪ್ರಯಾಣಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ಹೂವಿನಹಡಗಲಿ ತಾಲೂಕಿನ ಸೋಗಿಯಿಂದ ದಾವಣಗೆರೆಗೆ ಮದುವೆಗೆ ಹೋಗುತ್ತಿದ್ದ ವೇಳೆ ತೆಲಗಿ ಗ್ರಾಮದಲ್ಲಿ ಮಿನಿ ಬಸ್ ಪಲ್ಟಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಹಾಗೂ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾರಿಗನೂರಿಗೆ ಮದುವೆಗೆ ಹೋಗುತ್ತಿದ್ದ ಖಾಸಗಿ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದ ಬಳಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಹೂವಿನಹಡಗಲಿ ತಾಲೂಕಿನ ಸೋಗಿಯಿಂದ ದಾವಣಗೆರೆಗೆ ಮದುವೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವೀರೇಶ್ (25) ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುಗಳನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ಸೆರಿಸಲಾಗಿದ್ದು, ಸದ್ಯ ಹಲವಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.