ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು: ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹತ್ವದ ತೀರ್ಪು

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​​ ದೋಷಿ ಎಂದು ಜನಪತ್ರಿನಿಧಿಗಳ ವಿಶೇಷ ನ್ಯಾಯಾಲಯ ಈ ಹಿಂದೆ ತೀರ್ಪು ನೀಡಿತ್ತು. ಇದೀಗ ನ್ಯಾಯಾಲಯ ಶಾಸಕ ಸತೀಶ್​ ಸೈಲ್​​ ಸೇರಿದಂತೆ ಏಳು ಜನರ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ವಿವರ ಇಲ್ಲಿದೆ.

ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು: ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹತ್ವದ ತೀರ್ಪು
ಸತೀಶ್​​ ಸೈಲ್Image Credit source: Facebook
Follow us
Ramesha M
| Updated By: Ganapathi Sharma

Updated on:Oct 26, 2024 | 6:08 PM

ಬೆಂಗಳೂರು, ಅಕ್ಟೋಬರ್​ 26: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ (Mining Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ (Congress) ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24 ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿತ್ತು.

44 ಕೋಟಿ ರೂ.ಗೂ ಹೆಚ್ಚು ದಂಡ

ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ ವಿಧಿಸಿದ ದಂಡದ ಮೊತ್ತ 44 ಕೋಟಿ ರೂಪಾಯಿ ದಾಟಿದೆ. ಈಗ ಕಳೆದಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆ ಅನುಭವಿಸಬೇಕಿದೆ. ಸತೀಶ್ ಸೈಲ್‌ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್‌, ಮಲ್ಲಿಕಾರ್ಜುನ ಶಿಪ್ಪಿಂಗ್‌ಗೂ ಜೈಲು ಶಿಕ್ಷೆ ವಿಧಿಸಲಾಗಿದೆ.

ಶಾಸಕ ಸ್ಥಾನ ಅನರ್ಹ

ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್​ಗೆ 7 ವರ್ಷದಷ್ಟು ಜೈಲು ಶಿಕ್ಷ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.

ರಾಜಕೀಯ ಪರಿಣಾಮವೇನು?

ಇಡೀ ಪ್ರಕರಣದಿಂದ ಈಗ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪರಿಣಾಮಗಳು ಉಂಟಾಗಲಿದ್ದು ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಹೈಕೋರ್ಟ್ ತಡೆಹಿಡಿಯದಿದ್ದರೆ ಸತೀಶ್ ಸೈಲ್ ತಮ್ಮ ಶಾಸಕತ್ವದಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ. ಸತೀಶ್ ಸೈಲ್ ಅವರಿಗೆ ಈ ಪ್ರಕರಣದಲ್ಲಿ ಹೈಕೋರ್ಟ್ ಒಂದು ವೇಳೆ ಜಾಮೀನು ನೀಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು. ಇಲ್ಲದಿದ್ದರೆ ಸತೀಶ ಅವರು ಜನ ಪ್ರತಿನಿಧಿಗಳ ಕಾಯ್ದೆ ಅಡಿಯಲ್ಲಿ ಅನರ್ಹರಾದರೆ ಆರು ತಿಂಗಳ ಒಳಗೆ ಕಾರವಾರ ವಿಧಾನಸಭೆಗೆ ಮತ್ತೊಮ್ಮೆ ಚುನಾವಣೆ ನಡೆಯಬೇಕಾಗಿ ಬರಬಹುದು.

ಹೈಕೋರ್ಟ್ ಮೇಲೆ ನಿಂತಿದೆ ಭವಿಷ್ಯ

ಹೀಗಾಗಿ ಇಂದು ತೀರ್ಪು ಪ್ರಕಟವಾಗಿದ್ದರೂ ಸತೀಶ ಸೈಲ್ ಅವರು ಹೈಕೋರ್ಟಿನಲ್ಲಿ ತೀರ್ಪನ್ನು ಪ್ರಶ್ನಿಸಿದ ನಂತರ ಹೈಕೋರ್ಟ್ ಯಾವ ತೀರ್ಮಾನಕ್ಕೆ ಬರುತ್ತದೆ ಎಂಬುದರ ಮೇಲೆ ಸತೀಶ್ ಡೈಲಾಗ್ ಅವರ ರಾಜಕೀಯ ಭವಿಷ್ಯ ಅಡಗಿದೆ.

ಏನಿದು ಪ್ರಕರಣ?

ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ: 1 ಭಾರಿ ಪ್ರಮಾ ಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20 ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.

ಇದನ್ನೂ ಓದಿ: ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ? ಇಲ್ಲಿದೆ ವಿವರ

ಈ ಅದಿರನ್ನು ಕಾಯ್ದುಕೊಳ್ಳುವಂತೆ ಬೇಲೆಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆಯು ಸೂಚನೆಯನ್ನು ನೀಡಿತ್ತು. ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಮರು ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಅದಿರು ನಾಪತ್ತೆ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆಯು ದೂರು ನೀಡಿತ್ತು.

ಈ ಅಕ್ರಮವೆಸಗಿದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತಾಯ ಮಾಡಿದ್ದರು. ಆಗ ಹಗರಣ ಬೆಳಕಿಗೆ ಬಂದಿತ್ತು. 2010ರ ಜೂ.23ರಂದು ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು.

ಸುಪ್ರೀಂಕೋರ್ಟ್ 2009 ರಿಂದ ಮೇ 2010ರ ನಡುವೆ ರಾಜ್ಯದಲ್ಲಿನ ನಡೆದ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಅದಿರು ಸಾಗಣೆ ಕುರಿತು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರಂತೆ ಸಿಬಿಐ 2013ರ ಸೆ.13 ರಂದು ಕೇಸ್‌ ದಾಖಲಿಸಿ ತನಿಖೆಕೈಗೊಂಡಿತ್ತು.

ಸತೀಶ್ ಮಾಲಿಕತ್ವದ ಕಂಪನಿ ಸುಮಾರು 7.23 ಲಕ್ಷ ಟನ್‌ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ತನಿಖೆಯಲ್ಲಿ ಕಂಡುಬಂತು. ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ರವಾನೆ ಮಾಡಲಾಗಿತ್ತು ಎಂಬುದನ್ನು ಕೇಂದ್ರೀಯ ಸಮಿತಿ ಪ್ರಾಧಿಕಾರ (ಸಿಇಸಿ) ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.

ಇದನ್ನೂ ಓದಿ: ಬೇಲೆಕೇರಿ ಅದಿರು ಅಕ್ರಮ: ಸತೀಶ್ ಸೈಲ್ ಪಾತ್ರವೇನು? 14 ವರ್ಷ ಹಿಂದಿನ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ

ಆರೋಪಿಗಳ ಜತೆ ಸಂಚು ರೂಪಿಸಿ ಸತೀಶ್ ಸೈಲ್ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದರು. ಹೀಗೆ ರಫ್ತಾಗಿರುವ ಅದಿರಿನಲ್ಲಿ 7.23 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು ಸತೀಶ್ ಸೈಲ್ ಒಡೆತನದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈ.ಲಿ. ಕಂಪನಿಯೇ ರಫ್ತು ಮಾಡಿತ್ತು ಎಂದು ಸಿಬಿಐ ಆರೋಪಿಸಿತ್ತು. ಸಿಬಿಐ ಪರ ಎಸ್​ಪಿಪಿ ಕೆ.ಎಸ್.ಹೇಮಾ, ಶಿವಾನಂದ ಪೆರ್ಲ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:16 pm, Sat, 26 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ