ಬೆಂಗಳೂರು: ತಾವು ಈ ಹಿಂದೆ ನಿಭಾಯಿಸಿದ್ದ ಅರಣ್ಯ ಖಾತೆಯಂತಹ ಪ್ರಭಾವಿ ಖಾತೆಗೆ ಪಟ್ಟು ಹಿಡಿದು ಕುಳಿತಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಮಾಡಿಕೊಂಡಂತಿದೆ. ಇದೇ ಶ್ರಾವಣ ಶುಕ್ರವಾರ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರುಗಳನ್ನು ಇಂದು ಭೇಟಿಯಾಗುವ ಪ್ರೋಗ್ರಾಂ ಹಾಕಿಕೊಂಡಿದ್ದಾರೆ. ಅವರು ಸಚಿವ ಸ್ಥಾನಕ್ಕಷ್ಟೇ ರಾಜೀನಾಮೆ ನೀಡುತ್ತಾರಾ ಅಥವಾ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಾರಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಈ ಮಧ್ಯೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿರುವ ಸಚಿವ ಆನಂದ್ ಸಿಂಗ್ ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿಯೊಂದನ್ನು ನಡೆಸಲಿದ್ದಾರೆ.
ಸ್ಪೀಕರ್ ಕಾಗೇರಿ ಸಂಪರ್ಕ ಮಾಡಿದ ಆನಂದ್ ಸಿಂಗ್:
ದಿಢೀರ್ ಬೆಳವಣಿಗೆಯಲ್ಲಿ ಸಚಿವ ಆನಂದ್ ಸಿಂಗ್ ಇಂದು ಬೆಳಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರವಾಣಿ ಕರೆ ಮಾಡಿ, ಚರ್ಚೆ ನಡೆಸಿದ್ದಾರೆ. ಸದ್ಯ ಶಿರಸಿಯಲ್ಲಿರುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಬರುವುದಾಗಿ ಸ್ಪೀಕರ್ ಕಾಗೇರಿ, ಆನಂದ್ ಸಿಂಗ್ಗೆ ತಿಳಿಸಿದ್ದಾರೆ.
ಈ ಮಧ್ಯೆ, ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿರುವ ಸಚಿವ ಆನಂದ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರುಗಳನ್ನು ಇಂದು ಭೇಟಿಯಾಗುವ ಪ್ರೋಗ್ರಾಂ ಹಾಕಿಕೊಂಡಿದ್ದಾರೆ. ಮೊದಲು ಸಿಎಂ ಬೊಮ್ಮಾಯಿಯ ಭೇಟಿ ಮಾಡಿ, ಬಳಿಕ ಬಿಎಸ್ವೈ ಭೇಟಿ ಮಾಡಲಿರುವುದಾಗಿ ಸಚಿವ ಆನಂದ್ ಸಿಂಗ್ ಆಪ್ತ ಮೂಲಗಳು ತಿಳಿಸಿವೆ.
ಇದನ್ನೂ ಓದಿ:
(minister Anand singh may resign on friday to meet speaker kageri on august 13)
Published On - 12:13 pm, Wed, 11 August 21