ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

ಬಿಜೆಪಿಯ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ನಾನು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ
ಅರವಿಂದ ಲಿಂಬಾವಳಿ (ಸಂಗ್ರಹ ಚಿತ್ರ)

Updated on: Feb 23, 2021 | 8:07 PM

ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಅರವಿಂದ ಲಿಂಬಾವಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ನಾನು ಪಕ್ಷದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದೇನೆ. ಸಚಿವನಾಗಿ ಜವಾಬ್ದಾರಿ ಹೊತ್ತಿರುವುದರಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಉಪಾದ್ಯಕ್ಷನಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಸಲಹೆ, ಸಹಕಾರ ನೀಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಮಾರ್ಚ್​ 9ರ ಬಳಿಕ ಹೊಸ ದಿನಾಂಕ ನಿಗದಿ: ಅರವಿಂದ ಲಿಂಬಾವಳಿ

Published On - 8:06 pm, Tue, 23 February 21