ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಅರಣ್ಯ ಬೆಳೆಸುವ ಹಾಗೂ ವನ್ಯಜೀವಿ ಸಂತತಿ ಹೆಚ್ಚಳಕ್ಕೆ ಕಾರ್ಯಕ್ರಮ ರೂಪಿಸಲಾಗುವುದು: ಸಚಿವ ಅರವಿಂದ ಲಿಂಬಾವಳಿ

ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅರಣ್ಯವನ್ನು ಹಾಗೂ ಅರಣ್ಯದಲ್ಲಿ ಹಣ್ಣು ಹಂಪಲುಗಳ ಲಭ್ಯತೆಯನ್ನು ಹೆಚ್ಚಿಸಿ, ಕಾಡು ಪ್ರಾಣಿಗಳ ಸಂತತಿಯನ್ನು ಹೆಚ್ಚಿಸುವುದು ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಅರಣ್ಯ ಬೆಳೆಸುವ ಹಾಗೂ ವನ್ಯಜೀವಿ ಸಂತತಿ ಹೆಚ್ಚಳಕ್ಕೆ ಕಾರ್ಯಕ್ರಮ ರೂಪಿಸಲಾಗುವುದು: ಸಚಿವ ಅರವಿಂದ ಲಿಂಬಾವಳಿ
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಚಿವ ಅರವಿಂದ ಲಿಂಬಾವಳಿ
Follow us
sandhya thejappa
|

Updated on:Apr 24, 2021 | 3:35 PM

ದಕ್ಷಿಣ ಕನ್ನಡ: ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಅರಣ್ಯ ಅಭಿವೃದ್ಧಿಗಾಗಿ ಮತ್ತು ವನ್ಯಜೀವಿಗಳ ಸಂತತಿ ಅಭಿವೃದ್ಧಿಗೆ ಅರಣ್ಯ ಇಲಾಖೆಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಗೆಸ್ಟ್ ಹೌಸ್​ನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿದರು.

ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅರಣ್ಯವನ್ನು ಹಾಗೂ ಅರಣ್ಯದಲ್ಲಿ ಹಣ್ಣು ಹಂಪಲುಗಳ ಲಭ್ಯತೆಯನ್ನು ಹೆಚ್ಚಿಸಿ, ಕಾಡು ಪ್ರಾಣಿಗಳ ಸಂತತಿಯನ್ನು ಹೆಚ್ಚಿಸುವುದು ಅಗತ್ಯ. ಇದಕ್ಕೆ ಅರಣ್ಯ ಇಲಾಖೆ ಸಹಕಾರ ಅನಿವಾರ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರ ಈ ಸಲಹೆಯ ಬಗ್ಗೆ ಚರ್ಚೆ ನಡೆಸಿದ ಸಚಿವರು, ಈ ಕುರಿತು ಅರಣ್ಯಾಧಿಕಾರಿಗಳು ಸಭೆ ನಡೆಸಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ “ಪೈಲೆಟ್ ಪ್ರಾಜೆಕ್ಟ್” ಕೈಗೊಳ್ಳಲು ಕೂಡಲೇ ಸಿದ್ಧತೆ ಆರಂಭಿಸಲು ಸೂಚಿಸಿದರು.

ಜೂನ್ 05 ರಂದು ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಗುವುದು. ಅದಕ್ಕೆ ಪೂರ್ವಭಾವಿಯಾಗಿ ಸ್ಥಳೀಯ ಸ್ವಯಂಸೇವಕರು, ಸಂಘ- ಸಂಸ್ಥೆಗಳನ್ನು ಗುರುತಿಸಬೇಕು. ಸಸಿಗಳನ್ನು ಕ್ರೋಡೀಕರಿಸುವುದು ಹಾಗೂ ಕನಿಷ್ಠ 100 ಎಕರೆ ಜಾಗವನ್ನು ಗುರುತಿಸಬೇಕು ಎಂದು ಸಚಿವ ಅರವಿಂದ ಲಿಂಬಾವಳಿ ಸೂಚಿಸಿದರು. ಅಲ್ಲದೇ ಗಿಡ ನೆಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಸ್ಥಳೀಯರಿಗೆ ತರಬೇತಿ ನೀಡಲು ತಿಳಿಸಿದರು.

ಈ ಎಲ್ಲಾ ಕ್ರಮಗಳು ಪ್ರಾಣಿಗಳಿಗೆ ಆಹಾರ ಲಭ್ಯತೆ ಮಾತ್ರವಲ್ಲದೇ, ಮನುಷ್ಯರಿಗೆ ಆಮ್ಲಜನಕ ಲಭ್ಯವಾಗಲು ನೆರವಾಗುತ್ತದೆ. ಈ ಕಾರ್ಯಕ್ರಮ ಅರಣ್ಯ ಇಲಾಖೆ ಹಾಗೂ ಧರ್ಮಸ್ಥಳದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಇದನ್ನೂ ಓದಿ

ಕೊರೊನಾ ಲಕ್ಷಣ ಇಲ್ಲದವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಡಿ, ದಾಖಲಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ; ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ

ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?

(Minister Arvind Limbavali says a program for forest plantation and wildlife will be developed in collaboration)

Published On - 3:33 pm, Sat, 24 April 21