ಬೆಂಗಳೂರು: ಕೊವಿಡ್ ಕಾರಣ ಮುಂದೂಡಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಉನ್ನತ ಶಿಕ್ಷಣ ಇಲಾಖೆ ನಡೆಸಲು ಈಗ ಮುಂದಾಗಿದೆ. 1,242 ಹುದ್ದೆಗೆ ಪ್ರೊಫೆಸರ್ಗಳ ನೇಮಕಾತಿ, 310 ಪ್ರಾಂಶುಪಾಲರ ನೇಮಕ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ. ಲಿಖಿತ ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
2017 ನಂತರ ಅಸಿಸ್ಟೆಂಟ್ ಪ್ರೊಫೆಸರ್, 2009 ರ ನಂತರ ಪ್ರಾಂಶುಪಾಲ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ. ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಮೆರಿಟ್ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು. ಕೇವಲ ಮೆರಿಟ್ನ್ನು ಮಾತ್ರ ಈ ನೇಮಕಾತಿಯಲ್ಲಿ ಪರಿಗಣಿಲಾಗುತ್ತದೆ. ಕೋವಿಡ್ ಕಾರಣಕ್ಕೆ ನೇಮಕಾತಿ ತಡ ಆಗಿತ್ತು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ಕಡ್ಡಾಯಗೊಳಿಸಿಲ್ಲ, ಸ್ವಯಂಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಯತ್ನಾಳ್ ಹೇಳಿಕೆ ವಿಚಾರವಾಆಗಿಯೂ ಅವರು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಹೇಳಿಕೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ವರಿಷ್ಠರ ಮಟ್ಟದಲ್ಲಿ ಈ ವಿಚಾರ ಚರ್ಚೆಗೆ ತೆಗೆದುಕೊಳ್ಳಲಾಗಿದೆ. ನಮ್ಮ ಪಕ್ಷದ ಹೈಕಮಾಂಡ್ ದುರ್ಬಲವಾಗಿಲ್ಲ, ಪ್ರಬಲವಾಗಿದೆ ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಕೊವಿಡ್ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್
ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ