ರಂಗನಾಥಸ್ವಾಮಿ ದೇಗುಲಕ್ಕೆ ಸಚಿವ ರಾಮುಲು ಭೇಟಿ, ಕಾಯಕಲ್ಪದ ಭರವಸೆ

ಚಿತ್ರದುರ್ಗ: ಹೊಳಲ್ಕೆರೆ, ಹೊಸದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇತ್ತೀಚೆಗೆ ಹಾನಿಗೊಳಗಾಗಿದ್ದ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೂ ಶ್ರೀರಾಮುಲು ಭೇಟಿ ನೀಡಿದ್ದಾರೆ. ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಹಾನಿಯಾಗಿತ್ತು. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ದೇವಾಲಯದ ಕಾಯಕಲ್ಪಕ್ಕೆ ಭರವಸೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೆರೆ ಏರಿ ಹೊಡೆದ ನೀರಗುಂದ ಕೆರೆ, ಬೆಳೆನಾಶ ಸ್ಥಳಕ್ಕೆ ಭೇಟಿ […]

ರಂಗನಾಥಸ್ವಾಮಿ ದೇಗುಲಕ್ಕೆ ಸಚಿವ ರಾಮುಲು ಭೇಟಿ, ಕಾಯಕಲ್ಪದ ಭರವಸೆ
ಸಾಧು ಶ್ರೀನಾಥ್​

Updated on: Oct 24, 2019 | 5:20 PM

ಚಿತ್ರದುರ್ಗ: ಹೊಳಲ್ಕೆರೆ, ಹೊಸದುರ್ಗ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇತ್ತೀಚೆಗೆ ಹಾನಿಗೊಳಗಾಗಿದ್ದ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೂ ಶ್ರೀರಾಮುಲು ಭೇಟಿ ನೀಡಿದ್ದಾರೆ.

ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲ ಹಾನಿಯಾಗಿತ್ತು. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ದೇವಾಲಯದ ಕಾಯಕಲ್ಪಕ್ಕೆ ಭರವಸೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೆರೆ ಏರಿ ಹೊಡೆದ ನೀರಗುಂದ ಕೆರೆ, ಬೆಳೆನಾಶ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಪರಿಹಾರದ ಭರವಸೆ ನೀಡಿದ್ದಾರೆ. ಇದೇ ವೇಳೆ, ಸಾಣೇಹಳ್ಳಿ ಮಠಕ್ಕೆ ಭೇಟಿ‌ ನೀಡಿದ ಸಚಿವ ಶ್ರೀರಾಮುಲು, ಡಾ. ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಅವರನ್ನ ಭೇಟಿ‌‌ ಮಾಡಿದರು.

ಘಟನೆ ಹಿನ್ನೆಲೆ:
ಬರದನಾಡು ಚಿತ್ರದುರ್ಗದಲ್ಲಿ ಒಂದೇ ಸಮನೆ ಮಳೆಯಾದ ಕಾರಣ ಬೃಹತ್ ಬೆಟ್ಟವೇ ಕುಸಿದಿತ್ತು. ಜೊತೆಗೆ ಬೆಟ್ಟದಲ್ಲಿದ್ದ ಪುರಾತನ ದೇಗುಲ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲಕ್ಕೆ ಹಾನಿಯಾಗಿತ್ತು. ಬೆಟ್ಟದ ಕೆಳಭಾಗದಲ್ಲಿನ ಹನುಮಪ್ಪ ದೇಗುಲಕ್ಕೂ ಹಾನಿಯಾಗಿತ್ತು. ಆದರೆ ಬೆಟ್ಟ ಕುಸಿತದ ನಡುವೆ ಅಚ್ಚರಿ ರೀತಿಯಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇಗುಲದ ಗರ್ಭಗುಡಿಯಲ್ಲಿದ್ದ ರಂಗನಾಥಸ್ವಾಮಿ ವಿಗ್ರಹ ಮಾತ್ರ ಉಳಿದುಕೊಂಡಿತ್ತು. ಇದು ಸುತ್ತಮುತ್ತಲಿನ ಜನಕ್ಕೆ ಭಾರಿ ಕುತೂಹಲ ಉಂಟುಮಾಡಿತ್ತು.

 

Published On - 5:09 pm, Thu, 24 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us