ಸೋಂಕಿನಿಂದ ಮೃತಪಟ್ಟವರ ಕುಟುಂಬದ ನೆರವಿಗೆ ನಿಂತ ಬಿ.ಸಿ.ಪಾಟೀಲ್; 50 ಸಾವಿರ ರೂ. ಪರಿಹಾರ ಘೋಷಣೆ
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿನಿಂದ ಮೃತರ ಮನೆಗಳಿಗೆ ಸತಃ ತಾವೇ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ.
ಹಾವೇರಿ: ಕೊರೊನಾ ಎರಡನೇ ಅಲೆ ದೇಶದೆಲ್ಲೇಡೆ ತೀವ್ರವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಸಿನಿಮಾ ನಟ-ನಟಿಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದು, ಸೋಂಕಿತರ ನೆರವಿಗೆ ನಿಂತಿದ್ದಾರೆ. ಹೀಗಿರುವಾಗಲೇ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬದ ನೆರವಿಗೆ ನಿಂತ ಕೃಷಿ ಸಚಿವ ಬಿ.ಸಿ. ಪಾಟೀಲ್ ವೈಯಕ್ತಿಕವಾಗಿ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿನಿಂದ ಮೃತರ ಮನೆಗಳಿಗೆ ಸತಃ ತಾವೇ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ.
ಎರಡನೆ ಅಲೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೆ ಮೃತಪಟ್ಟಿರುವವರ ಸಂಖ್ಯೆ ಹದಿನೆಂಟಕ್ಕೆ ಏರಿಕೆಯಾಗಿದೆ. ಸೋಂಕಿತರಾಗಿ ಹೋಂ ಐಸೋಲೇಶನ್ನಲ್ಲಿರುವವರು ಕೊವಿಡ್ ಕೇರ್ ಸೆಂಟರ್ಗಳಿಗೆ ದಾಖಲಾಗಿ ಮತ್ತು ಆ ಮೂಲಕ ಕುಟುಂಬ ವರ್ಗದವರಿಗೆ ಕೊರೊನಾ ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:
ಮೈಸೂರು: ಹೋಂ ಐಸೋಲೇಷನ್ನಲ್ಲಿರೊ ಸೋಂಕಿತರಿಗೆ ವೈದ್ಯಕೀಯ ನೆರವು; ವಿದ್ಯಾರ್ಥಿಗಳಿಂದ ಶ್ಲಾಘನೀಯ ಕಾರ್ಯ