ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ; ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಚಿವ ಬಿ.ಸಿ.ಪಾಟೀಲ್

ಜಿಲ್ಲಾ ಆಸ್ಪತ್ರೆ ಸೇರಿದಂತೆ ಬಹುತೇಕ ಕಡೆ ಬೆಡ್ ಫುಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌ಪಾಟೀಲ್, ಸ್ಥಳೀಯ ಶಾಸಕರು, ಸಂಸದರು ಗವಿ ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಮನವಿಗೆ ಶ್ರೀಗಳು ಸ್ಪಂದಿಸಿದ್ದು 100 ಹಾಸಿಗೆಯ ಕೊವಿಡ್ ಕೇರ್ ಸೆಂಟರ್ ತೆರೆಯಲು‌ ಮುಂದಾಗಿದ್ದಾರೆ.

ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧಾರ; ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಚಿವ ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್​

Updated on: May 07, 2021 | 10:07 AM

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಗವಿಮಠದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಸಿದ್ದೇಶ್ವರ ಶ್ರೀ ಒಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೂ ಸೋಂಕಿತರು ಆಕ್ಷಿಜನ್, ಬೆಡ್ ಕೊರತೆಯಿಂದ ಮೃತಪಡುತ್ತಿದ್ದಾರೆ. ಹೀಗಾಗಿ ಕೊಪ್ಪಳದಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆಯಲು ಗವಿ ಮಠ ಸ್ವಾಮಿಜಿ ಮುಂದಾಗಿದ್ದಾರೆ.

ಜಿಲ್ಲಾ ಆಸ್ಪತ್ರೆ ಸೇರಿದಂತೆ ಬಹುತೇಕ ಕಡೆ ಬೆಡ್ ಫುಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌ಪಾಟೀಲ್, ಸ್ಥಳೀಯ ಶಾಸಕರು, ಸಂಸದರು ಗವಿ ಮಠದ ಶ್ರೀಗಳಿಗೆ ಮನವಿ ಸಲ್ಲಿಸಿದ್ದರು. ಸದ್ಯ ಮನವಿಗೆ ಶ್ರೀಗಳು ಸ್ಪಂದಿಸಿದ್ದು 100 ಹಾಸಿಗೆಯ ಕೊವಿಡ್ ಕೇರ್ ಸೆಂಟರ್ ತೆರೆಯಲು‌ ಮುಂದಾಗಿದ್ದಾರೆ.

ಸಂಕಷ್ಟ ಕಾಲದಲ್ಲಿ ಸಹಕಾರ ನೀಡಿದ ಶ್ರೀಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧನ್ಯವಾದ ತಿಳಿಸಿದ್ದಾರೆ. ಇಂತಹ ಇಕ್ಕಟ್ಟಿನ ಸಮಯದಲ್ಲಿ ನಮ್ಮ ಕೈ ಜೋಡಿಸಿದ್ದಕ್ಕೆ ಶ್ರೀಗಳಿಗೆ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Mother’s Day 2021 Date: ತಾಯಿಯ ಸಂತೋಷಕ್ಕೆ ನೀವು ಕಾರಣರಾಗಿ, ಹೇಳಿ ವಿಶ್ವ ಅಮ್ಮಂದಿರ ದಿನದ ಶುಭಾಶಯ