ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ

ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಯಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ನಿಗದಿಯಾದಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ; ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಸ್ಪಷ್ಟನೆ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
Follow us
shruti hegde
|

Updated on:Mar 23, 2021 | 2:25 PM

ಬೆಂಗಳೂರು: ಆಫ್‌ಲೈನ್ ಕ್ಲಾಸ್ ಮತ್ತು ನಿಗದಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ. ಕೊವಿಡ್ ಕಾರಣಕ್ಕಾಗಿ ಪದವಿ ಕೋರ್ಸ್‌ಗಳ ಆಫ್‌ಲೈನ್ ಕ್ಲಾಸ್ ನಡೆಸಲಾಗುತ್ತದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಬದಲಾವಣೆಗಳಿಲ್ಲ. ನಿಗದಿಯಂತೆ ಪರೀಕ್ಷೆಗಳು ಮತ್ತು ಆಫ್‌ಲೈನ್ ಕ್ಲಾಸ್ ನಡೆಯುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಮಾಧ್ಯಮ ಪ್ರಕಟನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಕೊವಿಡ್ ನಿಯಮ ಪಾಲಿಸುವಂತೆ ಎಲ್ಲರಿಗೂ ಸೂಚಿಸಿದ್ದೇವೆ. ಸರಕಾರ ಹೊರಡಿಸಿರುವ ಮಾದರಿ ವೇಳಾಪಟ್ಟಿಯಂತೆ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ವೇಳಾಪಟ್ಟಿ ಅನುಸಾರ ಹಾಲಿ ನಡೆಯುತ್ತಿರುವ ಆಫ್​ ಲೈನ್‌ ತರಗತಿಗಳನ್ನು ಹಾಗೆಯೇ ಮುಂದುವರಿಸಲಾಗುವುದು. ಕೊವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಹಾಗೂ ಮಹಾವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ವಿಶ್ವವಿದ್ಯಾಲಯಗಳು, ಕಾಲೇಜುಗಳು,  ಪಾಲಿಟೆಕ್ನಿಕ್‌ಗಳು ಮತ್ತು ಇನ್ನಿತರೆ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಎರಡನೇ ಅಲೆ ಬೀರುವ ಪರಿಣಾಮಗಳ ಮಹತ್ವದ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಅವರ ಜತೆಗೂ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿ ನಡೆಸುತ್ತಿರುವ ಹಾಸ್ಟೆಲ್‌ಗಳನ್ನು ಮುಂದುವರಿಸಲು ಆಯಾ ಇಲಾಖೆಗಳನ್ನು ಕೋರಲಾಗುವುದು ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ, ಮಹಾವಿದ್ಯಾಲಯಗಳಲ್ಲಿ ಹಾಗೂ ಹಾಸ್ಟೆಲ್​ಗಳಲ್ಲಿ ಕೊವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಖಾಸಗಿ ಶಾಲಾ ಒಕ್ಕೂಟದಿಂದ ಪ್ರತಿಭಟನೆ: SSLC ಪರೀಕ್ಷೆ ವೇಳೆ ಪ್ರತಿಭಟನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ

Published On - 2:25 pm, Tue, 23 March 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ