Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka BJP: ಯೋಗೇಶ್ವರ್ -ಯತ್ನಾಳ್ ರಹಸ್ಯ ಭೇಟಿ, ರಮೇಶ್ ಜಾರಕಿಹೊಳಿ ದಿಢೀರ್‌ ದೆಹಲಿಗೆ; ಬಿಜೆಯಲ್ಲಿ ಮತ್ತೆ ತಳಮಳ

ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ಮನೆಮಾಡಿವೆ ಅನ್ನುತ್ತಿದೆ ಇಂದಿನ ದಿಢೀರ್​ ಬೆಳವಣಿಗೆಗಳು. 

Karnataka BJP: ಯೋಗೇಶ್ವರ್ -ಯತ್ನಾಳ್ ರಹಸ್ಯ ಭೇಟಿ, ರಮೇಶ್ ಜಾರಕಿಹೊಳಿ ದಿಢೀರ್‌ ದೆಹಲಿಗೆ; ಬಿಜೆಯಲ್ಲಿ ಮತ್ತೆ ತಳಮಳ
ಸಚಿವ ಸಿ.ಪಿ.ಯೋಗೇಶ್ವರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 29, 2021 | 4:04 PM

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ಮನೆಮಾಡಿವೆ ಅನ್ನುತ್ತಿದೆ ಇಂದಿನ ದಿಢೀರ್​ ಬೆಳವಣಿಗೆಗಳು. 

ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ದಿಢೀರ್‌ ದೆಹಲಿಗೆ ಹಾರಿದ್ದಾರೆ.  ರಮೇಶ್ ಮುಂಬೈ ಪ್ಲ್ಯಾನ್‌ ಚೇಂಜ್‌ ಮಾಡಿ,ಬೆಗಳೂರಿಗೆ ಬಂದಿದ್ದು ಯಾಕೆ..? ಯಾರ ಸಲಹೆಯಂತೆ ದೆಹಲಿಗೆ ಹೋದ್ರು ರಮೇಶ್‌..? ಇಲ್ಲಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಉಳಿಯುವ ಪ್ರೋಗ್ರಾಮ್ ಹಾಕಿಕೊಂಡಿದ್ದ ರಮೇಶ್​ ಜಾರಕಿಹೊಳಿ ದಿಢಿರನೆ ದಿಲ್ಲಿಗೆ ಹಾರಿದ್ದೇಕೆ ಎಂಬುದಕ್ಕೆ ತಕ್ಷಣ ಉತ್ತರ ಇಲ್ಲವಾಗಿದೆ.

ಈ ಮಧ್ಯೆ,​  ಸಚಿವ ಸಿ.ಪಿ. ಯೋಗೇಶ್ವರ್ ಅವರು ಶಾಸಕ ಬಸನಗೌಡ ಯತ್ನಾಳ್ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಭೇಟಿ ವೇಳೆ ನಡೆದ ಭೊಜನದ ವೇಳೆ ಬಿಜೆಪಿ ಮುಖಂಡರಾದ ಚಿತ್ರ ನಟಿ ಶ್ರುತಿ ಹಾಗೂ ಇತರರು ಹಾಜರಿದ್ದದ್ದು ಗಮನಾರ್ಹವಾಗಿತ್ತು. ಭೇಟಿಯ ವೇಳೆ ಸಚಿವ ಯೊಗೇಶ್ವರಗೆ ಬಸನಗೌಡ ಯತ್ನಾಳ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.  ಕೆಲ ಕಾಲ ಶಾಸಕ ಯತ್ನಾಳ್ ಹಾಗೂ ಸಚಿವ ಯೋಗೇಶ್ವರ ರಹಸ್ಯವಾಗಿ ಚರ್ಚೆ ನಡೆಸಿದರು.

ಈ ಬೆವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಕುರಿತು ತೆರೆಮರೆಯಲ್ಲಿ ನಡೆಯುತ್ತಿದೆಯಾ ಪ್ಲಾನ್? ಸಿಎಂ ವಿರೋಧಿಗಳನ್ನು ಒಂದುಗೂಡಿಸ್ತಿದ್ದಾರಾ ಸಚಿವ ಸಿ ಪಿ ಯೋಗೇಶ್ವರ? ಎಂಬ ಪ್ರಶ್ನೆ ಬಿಜೆಪಿಯನ್ನು ಮತ್ತೆ ಕಾಡತೊಡಗಿದೆ.

ಕಲಬುರಗಿಯಿಂದ ವಿಜಯಪುರ ಜಿಲ್ಲೆಗೆ ಆಗಮಿಸಿದ ಪ್ರವಾಸೋದ್ಯಮ ಇಲಾಖೆ ಸಚಿವ ಯೋಗೇಶ್ವರ ಅವರು ಸಿಎಂ ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಬಂಡಾಯ ಎದ್ದಿರುವ ಶಾಸಕ ಯತ್ನಾಳ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ವಿಜಯಪುರ ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲೊಂದರಲ್ಲಿ ಯತ್ನಾಳ್ ಹಾಗೂ ಯೋಗೇಶ್ವರ ಭೇಟಿ ನಡೆದಿದೆ.

(minister cp yogeshwar meets bjp mla Basangouda Patil Yatnal in vijayapura)

Published On - 4:02 pm, Tue, 29 June 21