ಸಚಿವ ದಿನೇಶ್​ ಗುಂಡೂರಾವ್​ಗೂ ತಟ್ಟಿದ ಬೆಂಗ್ಳೂರು ಟ್ರಾಫಿಕ್ ಬಿಸಿ, ಮಂಗಳೂರು ಪ್ರವಾಸ ರದ್ದು

ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಆಗಿದೆ. ಈ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿತ್ತು. ಆದ್ರೆ, ಅವರಿಗೆ ಬೆಂಗಳೂರು ಟ್ರಾಫಿಕ್​ ಬಿಸಿ ತಟ್ಟಿದ್ದು, ಫೈಟ್​ ಮಿಸ್ ಆಗಿದೆ.

ಸಚಿವ ದಿನೇಶ್​ ಗುಂಡೂರಾವ್​ಗೂ ತಟ್ಟಿದ ಬೆಂಗ್ಳೂರು ಟ್ರಾಫಿಕ್ ಬಿಸಿ, ಮಂಗಳೂರು ಪ್ರವಾಸ ರದ್ದು
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​​​
Follow us
ರಮೇಶ್ ಬಿ. ಜವಳಗೇರಾ
|

Updated on: Jul 21, 2024 | 12:13 PM

ಬೆಂಗಳೂರು/ಮಂಗಳೂರು, (ಜುಲೈ 21): ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಂಗಳೂರಿಗೆ ತೆರಳಬೇಕಿತ್ತು. ಆದ್ರೆ, ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿದ್ದಾರೆ. ಅತ್ತ ಅವರು ಪ್ರಯಾಣಿಸಬೇಕಿದ್ದ ವಿಮಾನ ಸಹ ಟೇಕಾಫ್ ಆಗಿದೆ. ಹೀಗಾಗಿ ವಿಮಾನ ಮಿಸ್ ಆಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ಮಂಗಳೂರು ಜಿಲ್ಲಾ ಪ್ರವಾಸ ರದ್ದಾಗಿದೆ.

ದಿನೇಶ್ ಗುಂಡೂರಾವ್ ಅವರು ಇಂದು(ಜುಲೈ 21) ಮಂಗಳೂರು ಜಿಲ್ಲೆಯ ಅದ್ಯಪಾಡಿ, ಕೆತ್ತಿಕಲ್, ಪಾಣೆಮಂಗಳೂರು ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಬೇಕಿತ್ತು. ಮಳೆ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಯನ್ನೂ ಕೈಗೊಳ್ಳಲಾಗಿತ್ತು. ಆದ್ರೆ, ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಲಾರಿ ಸಿಲುಕಿ ವಾಹನ ದಟ್ಟಣೆ ಉಂಟಾಗಿದ್ದರಿಂದ ದಿನೇಶ್ ಗುಂಡೂರಾವ್ ಅವರು ತಡವಾಗಿ ಬಂದಿದ್ದಾರೆ. ಆದ್ರೆ, ಅಷ್ಟರಾಗಲೇ ಸರಿಯಾದ ಸಮಯಕ್ಕೆ ವಿಮಾನ ಟೇಕಫ್​ ಆಗಿ ಮಂಗಳೂರಿನತ್ತ ಹಾರಿದೆ. ಇದರಿಂದ ದಿನೇಶ್ ಗುಂಡೂರಾವ್ ಅವರ ಮಂಗಳೂರು ಭೇಟಿ ರದ್ದಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆ: ಇಲ್ಲಿದೆ ವಿಡಿಯೋ

ಉಡುಪಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಜಿಲ್ಲೆಗೆ ಕೊನೆಗೂ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಎರಡು ವಾರಗಳಿಂದ ಭಾರೀ ಮಳೆಗೆ ತುತ್ತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಎರಡು ವಾರಗಳಿಂದ ಭಾರಿ ಮಳೆಗೆ ತುತ್ತಾಗಿದ್ದ ಜಿಲ್ಲೆಗೆ ಸಚಿವೆ ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ನೆರೆ, ಪ್ರವಾಹ ಕಡಿಮೆ ಆಗುತ್ತಲೇ‌ ಉಡುಪಿಗೆ ಸಚಿವೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಡುಪಿ ನಗರ ಸೇರಿದಂತೆ ಹಲವೆಡೆ ಹಾನಿಯಾಗಿವೆ. ಬೈಂದೂರು ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಮರಗಳು ಧರಶಾಹಿಯಾಗಿವೆ. ನದಿಗಳು ಅಪಾಯ ಮಟ್ಟವನ್ನು ಮೀರಿ ಕೃತಕ ನೆರೆ ಸೃಷ್ಟಿಯಾಗಿದೆ. ಕಡಲ್ಕೊರೆತವೂ ತೀವ್ರವಾಗಿದೆ. ಇದರಿಂದ ನೂರಾರು ಮಂದಿ ತೊಂದರೆಗೆ ಒಳಗಾಗಿದ್ದಾರೆ. ಬೈಂದೂರು ಭಾಗದಲ್ಲಿ ಸೇತುವೆಗಳಿಲ್ಲದೇ ಹಲವು ರೀತಿಯ ಸಂಕಷ್ಟ ಎದುರಾಗಿದೆ. ಪಡುಬಿದ್ರಿ, ಮಲ್ಪೆ ಕಡಲ್ಕೊರೆತಕ್ಕೆ ಸಿಕ್ಕಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಇಷ್ಟಾಗಿಯೂ ಉಸ್ತುವಾರಿ ಸಚಿವೆ ಭೇಟಿಯಾಗದಿರುವ ಬಗ್ಗೆ ಭಾರಿ ವಿರೋಧ ಕೇಳಿ ಬಂದಿತ್ತು. ಇದೀಗ ಕೊನೆಗೂ ಇಂದು ಉಡುಪಿ ಜಿಲ್ಲೆಗೆ ಸಚಿವೆ ಆಗಮಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ