ಕೇಂದ್ರ ಸರ್ಕಾರದಿಂದ ಕೋವಿಶೀಲ್ಡ್, ಕೋವ್ಯಾಕ್ಸಿನ್ ಪೂರೈಕೆ.. ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ...

ಕೇಂದ್ರ ಸರ್ಕಾರದಿಂದ ಕೋವಿಶೀಲ್ಡ್, ಕೋವ್ಯಾಕ್ಸಿನ್ ಪೂರೈಕೆ.. ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)

Updated on: May 09, 2021 | 12:59 PM

ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕಿನ ವಿರುದ್ಧ ನೀಡುವ ಲಸಿಕಾ ಅಭಿಯಾನಕ್ಕೆ ಮೇ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಾಂಕೇತಿಕ ಚಾಲನೆ ನೀಡಿದ್ರು. ಸದ್ಯ ಈಗ ಮೇ 10ರಿಂದ 18-44 ವರ್ಷದವರಿಗೆ ವ್ಯಾಕ್ಸಿನ್ ನೀಡಿಕೆ ಬಗ್ಗೆ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ನಿನ್ನೆ 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ಈವರೆಗೂ ಒಟ್ಟು 6.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ 99,58,190 ಡೋಸ್ ಕೊವಿಶೀಲ್ಡ್, 10,91,280 ಡೋಸ್ ಕೊವ್ಯಾಕ್ಸಿನ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದ್ದು ಈವರೆಗೆ ಒಟ್ಟು 1,10,49,470 ಡೋಸ್ ಲಸಿಕೆ ತಲುಪಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

Published On - 12:46 pm, Sun, 9 May 21