ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ
ಚಾಮರಾಜನಗರದ ಮಲೆಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿವೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದ್ದು, ಉನ್ನತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಸಚಿವ ಈಶ್ವರ ಖಂಡ್ ಅವರುರೆ ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಬೆಂಗಳೂರು/ಚಾಮರಾಜನಗರ , (ಜೂನ್ 26): ಚಾಮರಾಜನಗರ (Chamarajnagara) ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ (male mahadeshwara forest) ವಲಯದಲ್ಲಿ ತಾಯಿ ಹುಲಿ (Tiger) ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿಪ್ರೇಮಿಗಳಲ್ಲಿ ಆತಂಕ ಉಂಟುಮಾಡಿದ್ದು, ಯಾರೋ ಕಿಡಿಗೇಡಿಗಳು ವಿಷಪ್ರಾಶನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ತನಿಖೆಗೆ ಆದೇಶಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್ ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಾಂಸದಲ್ಲಿ ವಿಷ ಹಾಕಿ ತಾಯಿ ಹುಲಿ ಹಾಗೂ ಅರ ಮೂರು ಮರಿಗಳನ್ನು ಕೊಂದಿರುವ ಶಂಕೆ ವ್ತಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ತ್ವರಿತ ತನಿಖೆಗೆ ಪ್ರಾರಂಭವಾಗಿದೆ. ಈ ನಿಷ್ಕರಣೆಯ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪಿಸಿಸಿಎಫ್ (ಪ್ರಿನ್ಸಿಪಲ್ ಚೀಫ್ ಕಾಂಸರ್ವೇಟರ್ ಆಫ್ ಫಾರೆಸ್ಟ್) ಅವರ ನೇತೃತ್ವದಲ್ಲಿ ತಕ್ಷಣ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: 24 ಗಂಟೆಗಳಲ್ಲಿ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು
ಕರ್ನಾಟಕ 563 ಹುಲಿಗಳೊಂದಿಗೆ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.
ಅರಣ್ಯ ಸಚಿವ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,’4 ಹುಲಿಗಳ ಅಸಹಜ ಸಾವಿಗೆ ಕಾರಣವಾದ ವಿಷಯವನ್ನು ಆಳವಾಗಿ ಪರಿಶೀಲಿಸಿ, ತನಿಖೆ ನಡೆಸಬೇಕು. ಅರಣ್ಯ ಸಿಬ್ಬಂದಿಯಿಂದ ನಿರ್ಲಕ್ಷ್ಯ ನಡೆದಿದೆ ಎಂಬುದಾದರೆ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಘಟನೆ ವಿಷಪ್ರಾಶನದ ಫಲಿತಾಂಶವಲ್ಲವೆಂಬುದು ಸಾಬೀತಾದರೆ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
6 ಮಂದಿ ಅಧಿಕಾರಿಗಳ ತಂಡ ರಚನೆ
ಹುಲಿಗಳ ಅಸಹಜ ಸಾವು ತನಿಖೆಗೆ ಅರಣ್ಯ ಇಲಾಖೆ 6 ಜನರ ತಂಡ ರಚನೆ ಮಾಡಲಾಗಿದೆ.
- ಬಿ.ಪಿ ರವಿ, ಪಿಸಿಸಿಎಫ್ – ಅಧ್ಯಕ್ಷರು
- ಶ್ರೀನಿವಾಸುಲು- ಎಪಿಸಿಸಿಎಫ್
- ಹೀರಾಲಾಲ್ ಟಿ- ಸಿಸಿಫ್
- ನ್ಯಾಷನಲ್ ಟೈಗರ್ ಕನ್ಸರ್ವೇಷನ್ ಅಥಾರಿಟಿಯ ಒಬ್ಬ ಸದಸ್ಯರು
- ಪಶುವೈದ್ಯಾಧಿಕಾರಿ
- ಡಾ.ಸಂಜಯ್ ಗುಬ್ಬಿ- ತಜ್ಞರು
Published On - 4:10 pm, Thu, 26 June 25




