ಭಾರತೀಯರಿಗೆ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್: ಬಿಜೆಪಿಗೆ ತಿರುಗೇಟು ನೀಡಿದ ಜಿ ಪರಮೇಶ್ವರ

ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್​ ಸರ್ಕಾರ ಹಿಂಪಡೆಯುತ್ತಿರುವುದಕ್ಕೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಭಾರತೀಯರಿಗೆ ಸಂವಿಧಾನವೇ ಭಗವದ್ಗೀತೆ, ಬೈಬಲ್, ಕುರಾನ್: ಬಿಜೆಪಿಗೆ ತಿರುಗೇಟು ನೀಡಿದ ಜಿ ಪರಮೇಶ್ವರ
ಗೃಹ ಸಚಿವ ಡಾ.ಜಿ.ಪರಮೇಶ್ವರ್
Follow us
ವಿವೇಕ ಬಿರಾದಾರ
|

Updated on: Jun 17, 2023 | 2:55 PM

ಬೆಂಗಳೂರು: ಬಿಜೆಪಿಯವರು (BJP) ಈಗ ಮತಾಂತರ ನಿಷೇಧ ಕಾಯ್ದೆ (Anti Conversion Act) ಬಗ್ಗೆ ಮಾತಾಡ್ತಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ (Indian Constitution) ಭಗವದ್ಗೀತೆ, ಬೈಬಲ್, ಕುರಾನ್. ಸಂವಿಧಾನವೇ ಭಾರತೀಯರಿಗೆ ಗ್ರಂಥ ಇದ್ದಂತೆ. ಕಲಂ 25ರಲ್ಲಿ ಪ್ರತಿಯೊಬ್ಬರಿಗೂ ಧರ್ಮ ಆಯ್ಕೆಯ ಹಕ್ಕು ನೀಡಿದೆ. ಅದಕ್ಕೆ ವಿರುದ್ಧವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರು. ಈ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅಂದೇ ಹೇಳಿದ್ದೆವು. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ (G Parameshwar) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈಗ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹಾಗಾಗಿ ನಾವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ. ಇನ್ನು ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರವಾಗಿ ಮಾತನಾಡಿ ಬಿಜೆಪಿಯವರನ್ನ ಕೇಳಿಕೊಂಡು ಅಧಿಕಾರ ಮಾಡಲು ಆಗೋದಿಲ್ಲ. ನಾವು ಈಗಾಗಲೇ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಅದರಂತೆ ಗ್ಯಾರಂಟಿಗಳನ್ನ ಜಾರಿಗೊಳಿಸುತ್ತೇವೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ

ಎಷ್ಟೇ ಕಷ್ಟವಾದರೂ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಜನಪರ ಆಡಳಿತ ಕೊಡುವ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ. ಇವರನ್ನ ಕೇಳಿಕೊಂಡು ನಾವು ಆಡಳಿತ ಮಾಡಬೇಕೆ ? ರಾಜ್ಯದಲ್ಲಿ ಮರಳು ಮಾಫಿಯಾ ತಲೆ ಎತ್ತಿದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿ ಬಿಜೆಪಿಯವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ. ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯುವ ಬಗ್ಗೆ ತನ್ವೀರ್ ಸೇಠ್ ಪ್ರತಿಕ್ರಿಯೆ

ಮೈಸೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟದಲ್ಲಿ ನಾನಿಲ್ಲ. ಹೀಗಾಗಿ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಈ ವಿಚಾರ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ. ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ನಿರಾಸೆಯಾಗಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವುದು ಖುಷಿಯಿದೆ. ಮನುಷ್ಯನ ಆಸೆಗೆ ಕೊನೆಯಿಲ್ಲ. 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ರಾಯಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ