ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಳ; ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಅಲ್ಲ: ಹಾಲಪ್ಪ ಆಚಾರ್
ರಾಜ್ಯದಲ್ಲಿ ಸದ್ಯ ಕೊವಿಡ್ ಪಾಸಿಟಿವಿ ಕಡಿಮೆಯಿದೆ. ಮಳೆಗಾಲ ಹಿನ್ನೆಲೆ ಮಕ್ಕಳಲ್ಲಿ ಡೆಂಘೀ ಕಾಣಿಸಿಕೊಳ್ಳುತ್ತಿದೆ. ಇದನ್ನು ಪ್ರತಿ ವರ್ಷ ನಾವು ನೋಡುತ್ತೇವೆ ಎಂದು ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಕೊಪ್ಪಳ: ರಾಜ್ಯದಲ್ಲಿ ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಾಗಿರುವ ವಿಚಾರಕ್ಕೆ ಸಂಬಂಧಿಸಿ ಕೊಪ್ಪಳ ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸಚಿವ ಹಾಲಪ್ಪ ಆಚಾರ್ ಹೇಳಿಕೆ ನೀಡಿದ್ದಾರೆ. ಇದು ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಅಲ್ಲ. ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ 3ನೇ ಅಲೆ ಮುನ್ಸೂಚನೆ ಎಂದು ಹೇಳಲಾಗಿದೆ. ಆದರೆ ರಾಜ್ಯದಲ್ಲಿ ಸದ್ಯ ಕೊವಿಡ್ ಪಾಸಿಟಿವಿ ಕಡಿಮೆಯಿದೆ. ಮಳೆಗಾಲ ಹಿನ್ನೆಲೆ ಮಕ್ಕಳಲ್ಲಿ ಡೆಂಘೀ ಕಾಣಿಸಿಕೊಳ್ಳುತ್ತಿದೆ. ಇದನ್ನು ಪ್ರತಿ ವರ್ಷ ನಾವು ನೋಡುತ್ತೇವೆ ಎಂದು ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಶೇಕಡಾ 20 ರಷ್ಟು ಮಳೆ ಹೆಚ್ಚಾಗಿದೆ. ಹೀಗಾಗಿ ಹೆಚ್ಚಾಗಿ ಮಕ್ಕಳಲ್ಲಿ ಡೆಂಘೀ ಕಾಣಿಸಿಕೊಳ್ಳುತ್ತಿದೆ. ಮಕ್ಕಳಷ್ಟೇ ಅಲ್ಲ, ದೊಡ್ಡವರನ್ನು ಕೂಡ ಡೆಂಘೀ ಕಾಡುತ್ತಿದೆ. ಆದರೆ ಇದು ಕೊರೊನಾ ಮೂರನೇ ಅಲೆ ಮುನ್ಸೂಚನೆ ಅಲ್ಲ. ಸುಮಾರು ವರ್ಷಗಳಿಂದ ಇಂಥ ಕಾಯಿಲೆ ನೋಡಿದ್ದೇವೆ. ಕೊರೊನಾಗೂ ಇದಕ್ಕೂ ಲಿಂಕ್ ಮಾಡುವುದು ಬೇಡ. ಕೊರೊನಾಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಾಲಪ್ಪ ಆಚಾರ್ ಹೇಳಿಕೆ ನೀಡಿದ್ದಾರೆ.
ಕೊರೊನಾ ಸೋಂಕು ಎಂಡೆಮಿಕ್ ಹಂತ ತಲುಪಲಿದೆ ಕೊರೊನಾ ಸೋಂಕು ಭಾರತದಲ್ಲಿ ಮುಂದಿನ ಆರು ತಿಂಗಳಿನಲ್ಲಿ ಎಂಡೆಮಿಕ್ ಹಂತವನ್ನು ತಲುಪಲಿದೆ ಎಂದು ತಜ್ಞರು ಈ ಮೊದಲು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಂದರೆ, ಕೊವಿಡ್19 ಹೊಸ ರೂಪಾಂತರಿಗಳು ಕೊರೊನಾ ಮೂರನೇ ಅಲೆಯನ್ನು ತರಲಾರವು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಸುಜೀತ್ ಸಿಂಗ್ ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು.
ಕೊವಿಡ್ ಸೋಂಕು ಎಂಡೆಮಿಕ್ ಹಂತ ತಲುಪುತ್ತಿದೆ. ಅಂದರೆ, ಕೊರೊನಾ ಸೋಂಕನ್ನು ಇನ್ನು ಹೆಚ್ಚು ಉತ್ತಮವಾಗಿ ನಿರ್ವಹಿಸಬಹುದು. ಆರೋಗ್ಯ ಸೇವೆಗಳನ್ನು ಸುಲಭವಾಗಿ ನೀಡಬಹುದಾದ ಮಟ್ಟಿಗೆ ಕೊರೊನಾ ಬಾಧೆ ಕುಗ್ಗಲಿದೆ ಎಂದು ತಿಳಿಸಿದ್ದರು. ಕೇರಳದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿವೆ ಎಂದು ಅವರು ಹೇಳಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ ಆಗಲಿದೆ.
ಇದನ್ನೂ ಓದಿ: ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ
ಇದನ್ನೂ ಓದಿ: Coronavirus cases in India: ದೇಶದಲ್ಲಿ 30,570 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
Published On - 5:38 pm, Fri, 17 September 21