AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆಗಳಲ್ಲಿನ ಘೋಷವಾಕ್ಯ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಹೆಚ್​ಸಿ ಮಹದೇವಪ್ಪ

ರಾಜ್ಯದ ಎಲ್ಲ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಇದ್ದ ಘೋಷ ವಾಕ್ಯವನ್ನು ಬದಲಾಯಿಸಿರುವ ಸಮಾಜ ಕಲ್ಯಾಣ ಇಲಾಖೆ (Department of Social Welfare) ಕ್ರಮಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ. ಇನ್ನು ಘೋಷ ವಾಕ್ಯ ಬದಲಾವಣೆ ಬಗ್ಗೆ ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​ಸಿ ಮಹಾದೇವಪ್ಪ ಸ್ಪಷ್ಟನೆ ನೀಡಿದ್ದು, ಅದು ಈ ಕೆಳಗಿನಂತಿದೆ.

ವಸತಿ ಶಾಲೆಗಳಲ್ಲಿನ ಘೋಷವಾಕ್ಯ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಹೆಚ್​ಸಿ ಮಹದೇವಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on:Feb 19, 2024 | 7:29 PM

Share

ಬೆಂಗಳೂರು, (ಫೆಬ್ರವರಿ 19): ಕರ್ನಾಟಕದ ವಸತಿ ಶಾಲೆಗಳ (residential schools) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆ ಮಾಡಿರುವ ವಿಚಾರ ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​ಸಿ ಮಹದೇವಪ್ಪ(HC Mahadevappa)  ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಆದೇಶವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​ಸಿ ಮಹಾದೇವಪ್ಪ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಆದೇಶವಾಗಿಲ್ಲ. ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನ ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಮಾಡುವ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ. ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥ್ಯವನ್ನ ಬೆಳೆಸುವ ನಿಟ್ಟಿನಲ್ಲಿ ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಜಯಪುರ: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆ! ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ನಡೆ

ಸರ್ಕಾರದ ಅಧಿಕೃತ ಆದೇಶ ಪ್ರತಿಯೇ ಇಲ್ಲ

ಘೋಷ ವಾಕ್ಯ ಬದಲಾವಣೆ ಬಗ್ಗೆ ಸರ್ಕಾರದ ಅಧಿಕೃತ ಆದೇಶ ಪ್ರತಿ ಎಲ್ಲೂ ಇಲ್ಲ. ಈ ಸಂಬಂಧ ಟೆಲಿಗ್ರಾಂಗಳಲ್ಲಿ ಮಾತ್ರ ಆಯಾ ಜಿಲ್ಲೆಗಳ ಸಮಾಜ ಕಲ್ಯಾಣ ಅಧಿಕಾರಿಗಳು ಸೂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಲೆಯ ಮುಖ್ಯಸ್ಥರು, ಈ ಬಗ್ಗೆ ಅಧಿಕೃತ ಆದೇಶವನ್ನಾದರೂ ಕೊಡಿ ಎಂದು ಚಾಟ್‌ ಮೂಲಕ ಕೇಳಿರುವುದು ಗೊತ್ತಾಗಿದೆ. ಆದರೆ, ಈ ಬಗ್ಗೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಇಲಾಖೆಯ ಕ್ರಮವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಧಿಕೃತ ಆದೇಶ ಆಗಿದೆಯೋ ಇಲ್ಲವೋ ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ.

ಇದನ್ನೂ ಓದಿ: ಕೈಮುಗಿದು ಒಳಗೆ ಬಾ…: ಕುವೆಂಪು ಕವಿತೆಯ ಧ್ವನಿಯೇನು? ಇಲ್ಲಿದೆ ಸಾಹಿತ್ಯ, ಅರ್ಥ ವಿವರ

ಅಧಿಕೃತ ಆದೇಶವನ್ನು ಮಾಡದೆ ಕೇವಲ ಟೆಲಿಗ್ರಾಂ ಗ್ರೂಪ್‌ಗಳಲ್ಲಿ ಮಾತ್ರ ಈ ಬಗ್ಗೆ ಆದೇಶವನ್ನು ಮಾಡಲಾಗಿದೆಯೇ? ಅಲ್ಲಿ ಮಾಡಿರುವ ಕಟ್ಟುನಿಟ್ಟಿನ ಸೂಚನೆಯಿಂದಾಗಿ ಹಲವು ಕಡೆ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಹೆಚ್ಚಿನ ಕಡೆ ತುರ್ತಾಗಿ ಹಾಕಬೇಕಾದ್ದರಿಂದ ಬಣ್ಣ ಹೊಡಿಸಲು ಆಗದೆ, ಪೇಪರ್‌ಗಳಲ್ಲಿ ಹಾಕಲಾಗಿತ್ತು. ಈ ಕಾರಣದಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಯಥಾಸ್ಥಿತಿ ಇರುವಂತೆ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:25 pm, Mon, 19 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್