AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ. ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ […]

ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ, ಸಿಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
ಸದನದಲ್ಲಿ ಸಿ.ಡಿ. ಕೊಟ್ಟ ಬಿಜೆಪಿ ಸಚಿವ! ಸಿ.ಡಿ ನೋಡಿ ಗಾಬರಿಯಾದೆ ಎಂದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ!
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2021 | 1:46 PM

Share

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್​ ಅವರ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ತೆರಳಿದ್ದು ತಮ್ಮ ಬಾಲ್ಯ ಸ್ನೇಹಿತನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ.

ಇತ್ತ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಿರಿಯ ಮನೆ ಕಲಾಪ (ವಿಧಾನ ಪರಿಷತ್​) ನಡೆಯುತ್ತಿದೆ. ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರ ರೂಪವಾಗಿ ಸಚಿವ ಜೆಸಿ ಮಾಧುಸ್ವಾಮಿ ಅವರು ಸಿ.ಡಿ (CD) ನೀಡಿದಾಗ ಜೆಡಿಎಸ್ ಸದಸ್ಯ ಶ್ರೀಕಂಠೇ ಗೌಡ ಹಾಸ್ಯ ಚಟಾಕಿ ಹಾರಿಸಿದ್ದು, ಸದನ ನಗೆಗಡಲಲ್ಲಿ ತೇಲಿದೆ.

ಜೆಡಿಎಸ್ ಸದಸ್ಯ ಶ್ರೀಕಂಠೇಗೌಡರು ತಾವು ಕೇಳಿದ್ದ ಪ್ರಶ್ನೆಗೆ ಉತ್ತರ ರೂಪವಾಗಿ ಸಂಬಂಧಪಟ್ಟ ಸಚಿವರ ಕಡೆಯಿಂದ CD ಬಂದಾಗ ಅದನ್ನು ನೋಡಿ ಗಾಬರಿಯಾಗಿದೆ ಎಂದು ಶ್ರೀಕಂಠೇ ಗೌಡರು ಹೇಳಿದರು. CD ನೋಡಿ ನನಗೆ ಗಾಬರಿಯಾಗಿದೆ ಎಂದ ಶ್ರೀಕಂಠೇಗೌಡ, ಸಚಿವರು ನೀಡಿದ CDಯನ್ನು ಸದನಕ್ಕೆ ಎತ್ತಿ ತೋರಿಸಿದರು. ಏನ್ರಿ ಇದೆಲ್ಲ ಸುಮ್ನಿರಿ ಎಂದು ಸಭಾಪತಿ ಹೊರಟ್ಟಿ ನಗೆಯಾಡುತ್ತಲೇ ಪ್ರತಿಕ್ರಿಯಿಸಿದರು.

ಆದರೆ ಅದಕ್ಕೆ ಖಡಕ್​ ಉತ್ತರ ನೀಡಿದ ಸಚಿವ ಜೆಸಿ ಮಾಧುಸ್ವಾಮಿ ಅವರು ಅಷ್ಟೊಂದು ಮಾಹಿತಿ ಕೇಳಿದಾಗ CDಯನ್ನೂ ಕೊಡಬೇಕಾಗುತ್ತೆ, ಎನ್ ಸೈಕ್ಲೋಪಿಡಿಯಾನೂ ಕೊಡಬೇಕಾಗುತ್ತದೆ ಎಂದು ಸಭಾಪತಿ ಮತ್ತು ಶ್ರೀಕಂಠೇಗೌಡಗೆ ತಿಳಿಸಿದರು. ಆಗ ಅದು ಯಾವ ಸಿಡಿಯೋ ಅಂತಾ ಗಾಬರಿ ಬಿದ್ದೋದೆ ನಾನು ಎಂದು ಶ್ರೀಕಂಠೇಗೌಡ ಸೇರಿಸಿದರು.

ಈ ಹಂತದಲ್ಲಿ, ನಾವು ಮಾಹಿತಿ ಕೊಟ್ಟರೂ ವ್ಯಂಗ್ಯ ಮಾಡುತ್ತಾರೆ; ಕೊಡದಿದ್ದರೂ ವ್ಯಂಗ್ಯ ಮಾಡುತ್ತಾರೆಂದು ಮಾಧುಸ್ವಾಮಿ ಹುಸಿನಗೆಯೊಂದಿಗೆ ಹೇಳಿದರು.

Also Read:  ಹುಬ್ಬಳ್ಳಿ ಕುಚಿಕು ಗೆಳೆಯ ರಾಜು ಪಾಟೀಲ್ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿ, ಬಿಕ್ಕಿ ಬಿಕ್ಕಿ ಅಳುತ್ತಾ ಅಂತಿಮ ನಮನ

(minister jc madhu swamy gives answer to jds member in the form of cd in karnataka legislature house)

Published On - 12:55 pm, Thu, 16 September 21

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ