ಜಲಜೀವನ್ ಮಿಷನ್ ಯೋಜನೆಯಡಿ ತಕ್ಷಣ ಪ್ರಗತಿ ಸಾಧಿಸಲು ಸಚಿವ ಕೆ. ಎಸ್. ಈಶ್ವರಪ್ಪ ಸೂಚನೆ

ಜಿಲ್ಲೆಯಲ್ಲಿ ಇಲ್ಲಿಯವರೆಗೆ 145 ಕಾಮಗಾರಿ ಆದೇಶ ನೀಡಲಾಗಿದ್ದು, ಬಾಕಿ ಉಳಿದ 149 ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ತಕ್ಷಣ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳುವಂತೆ ಸಚಿವ‌ ಕೆ. ಎಸ್. ಈಶ್ವರಪ್ಪ ಹೇಳಿದರು.

ಜಲಜೀವನ್ ಮಿಷನ್ ಯೋಜನೆಯಡಿ ತಕ್ಷಣ ಪ್ರಗತಿ ಸಾಧಿಸಲು ಸಚಿವ ಕೆ. ಎಸ್. ಈಶ್ವರಪ್ಪ ಸೂಚನೆ
ಜಲಜೀವನ ಮಿಷನ್ ಯೋಜನೆ ಕುರಿತ ಸಭೆಯ ಚಿತ್ರಣ
Follow us
preethi shettigar
|

Updated on:Feb 26, 2021 | 1:13 PM

ವಿಜಯಪುರ: ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜಲಜೀವನ ಮಿಷನ್ ಯೋಜನೆಯಡಿಯ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು, ಗುತ್ತಿಗೆದಾರರಿಗೆ ಸೂಚಿಸುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೆ. ಎಸ್. ಈಶ್ವರಪ್ಪ ನಾಗರಿಕರಿಗೆ ನೀರು ಪೂರೈಸುವಂತಹ ಮಹತ್ವಾಕಾಂಕ್ಷೆಯ ಸರ್ಕಾರದ ಯೋಜನೆ ಇದಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಬಾಕಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಬೇಕು. ಇದಕ್ಕೆ ತಪ್ಪಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಖಡಕ್ ಎಚ್ಚರಿಕೆ ನೀಡಿದರು.‌

ಕಾಮಗಾರಿ‌‌ ವಿವರ : ಜಿಲ್ಲೆಯಲ್ಲಿ ಇಲ್ಲಿಯವರೆಗೆ 145 ಕಾಮಗಾರಿ ಆದೇಶ ನೀಡಲಾಗಿದ್ದು, ಬಾಕಿ ಉಳಿದ 149 ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ತಕ್ಷಣ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳುವಂತೆ ಸಚಿವ‌ ಕೆ. ಎಸ್. ಈಶ್ವರಪ್ಪ ಹೇಳಿದರು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ಮೂಲಕ ಸಕಾಲಕ್ಕೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ತಪ್ಪುವ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಕುರಿತು ಎಚ್ಚರಿಕೆ ನೀಡುವಂತೆ ಸೂಚನೆ ನೀಡಿ 2022-23 ನೇ ಸಾಲಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಸಿಧ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿದರು.

ಅಂಗನವಾಡಿ ಹಾಗೂ ಶಾಲೆಗಳಿಗೆ  ನೀರು‌ ನೀಡಿಲು ಸೂಚನೆ : ಜಿಲ್ಲೆಯ ಶಾಲೆ, ಅಂಗನವಾಡಿ, ವಸತಿ ನಿಲಯಗಳಿಗೆ ನೀರು ಸಂಪರ್ಕಿಸುವ ನೂರು ದಿನಗಳ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಬಹು‌ಹಳ್ಳಿ ಕುಡಿಯುವ ನೀರಿನ ಯೋಜನೆ ಹಾಗೂ ಇತರೆ ಜಲಮೂಲಗಳಿಂದ ನೀರು ಕಲ್ಪಿಸಬೇಕು. ಮುಂಬರುವ ಅಧಿವೇಶನದ ನಂತರ ಏಪ್ರಿಲ್ ತಿಂಗಳಲ್ಲಿ ಪುನಃ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವರಾದ ಕೆ. ಎಸ್. ಈಶ್ವರಪ್ಪ ಹೇಳಿದ್ದು, ಈಗಲೇ ಎಲ್ಲಾ ಕಾಮಗಾರಿಗಳ ಪೂರ್ಣತೆ ಬಗ್ಗೆ ಸಮೀಕ್ಷೆ ಮತ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

jal jeevan mission

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ

ಹಣಕಾಸು ಮಾಹಿತಿ : ಜಲಜೀವನ ಮಿಷನ್ ಯೋಜನೆಯಡಿ 15 ನೇ ಹಣಕಾಸು ಅಡಿಯಲ್ಲಿ 15.53 ಕೋಟಿ ರೂಪಾಯಿ ಗುರಿಗೆ 13.16 ಕೋಟಿ ರೂಪಾಯಿಗಳ ಸಮುದಾಯ ಕೊಡುಗೆ ಇದ್ದು, ಪ್ರಸಕ್ತ ವರ್ಷ ನೀಡಲಾದ 15.53 ಕೋಟಿ ರೂಪಾಯಿಗಳ ಸಂಗ್ರಹ ಗುರಿಗೆ ಕೇವಲ 47 ಲಕ್ಷ ರೂಪಾಯಿ ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿವಾರು ಯೋಜನೆ ಯಶಸ್ವಿಯಾಗುವ ಕಡೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸಮುದಾಯ ಕೊಡುಗೆ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ 36 ಯೋಜನೆಗಳು ಪೂರ್ಣಗೊಂಡಿದ್ದು, ಸಮರ್ಪಕವಾಗಿ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸಿದ ಅವರು  ಕಾಮಗಾರಿ ಪ್ರಗತಿಯಲ್ಲಿರುವ 5  ಯೋಜನೆಗಳ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಿದರು.

jal jeevan mission

ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ನಡೆದ ಸಭೆಯ ಚಿತ್ರಣ

ಶುದ್ದ ಕುಡಿಯುವ ನೀರಿನ‌ ಘಟಕ ದುರಸ್ತಿ ಬಗ್ಗೆ ಸಮೀಕ್ಷೆ : ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸಮರ್ಪಕ ಕಾರ್ಯ ನಿರ್ವಹಣೆ ದುರಸ್ತಿ ಮತ್ತು ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು.‌ ದುರಸ್ತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಮುಂಬರುವ ದಿನಗಳಲ್ಲಿ ಜಂಟಿ ಸದನ ಸಮಿತಿಗೆ ಯಾವುದೇ ರೀತಿಯ ಸುಳ್ಳು ಮಾಹಿತಿ ನೀಡದಂತೆ ತಿಳಿಸಿದ ಕೆ. ಎಸ್. ಈಶ್ವರಪ್ಪ ಆಯಾ  ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಆರ್​ಓ ಪ್ಲಾಂಟ್​ ದುರಸ್ತಿಗೆ ಮತ್ತು ಸುವ್ಯವಸ್ಥಿತ ಕಾರ್ಯನಿರ್ವಹಣೆಗೆ ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸೂಕ್ತ ನಿಗಾ ಇಡುವಂತೆ ಸೂಚನೆ ನೀಡಿದರು.

ಸ್ವಚ್ಛ್ ಭಾರತ್ ಮಿಷನ್ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸಬೇಕು ಶೌಚಾಲಯಗಳ ಕುರಿತು ಹಲವು ದೂರುಗಳು ಜಿಲ್ಲೆಯಿಂದ ಬರುತ್ತಿದ್ದು‌, ಅಲ್ಲಿಯ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು ಇಂತಹ ಶೌಚಾಲಯಗಳ ನಿರ್ಮಾಣಕ್ಕೆ ವಿಶೇಷ ಗಮನ ಮತ್ತು ಜಾಗಗಳ ಸಮಸ್ಯೆಯನ್ನು ಬಗೆಹರಿಸಬೇಕು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅಂಗನವಾಡಿ ಕೇಂದ್ರಗಳ ಮತ್ತು ಸಮುದಾಯ ಶೌಚಾಲಯಗಳ ಪ್ರಗತಿ ಪರಿಶೀಲನೆ ನಡೆಸಿ ಕೆಟ್ಟಿರುವ ಶೌಚಾಲಯಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ಅಥಿಕ್, ಶಾಸಕ ದೇವಾನಂದ ಚವ್ಹಾಣ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುಜಾತ ಕಳ್ಳಿಮನಿ, ಜಿಲ್ಲಾ ಪಂಚಾಯತಿ ಸಿಇಓ ಗೋವಿಂದರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಗ್ ಟ್ವಿಸ್ಟ್ ಸಾಧ್ಯತೆ! ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಇಂದು ಮಹತ್ವದ ಸಭೆ; ಒತ್ತಡ ಹಾಕಿ ಮೀಸಲಾತಿ ಪಡೆಯಲು ಆಗಲ್ಲ ಸಚಿವ ಈಶ್ವರಪ್ಪ

Published On - 1:12 pm, Fri, 26 February 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?