ನಿಮ್ಮ ಫೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕಿಲ್ಲ: ಡಾ. ಸುಧಾಕರ್ ತಿರುಗೇಟು

ಬೆಂಗಳೂರು: ನಮ್ಮ ಫೋನ್ ಕದ್ದಾಲಿಕೆ ಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಲಾಗಿದ್ದು,ಈ ಆರೋಪಕ್ಕೆ ಸಚಿವ ಸುಧಾಕರ್ ಮುಖಾಂತರ ಟ್ವೀಟ್ ಮುಖಾಂತರ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ? ನಿಮ್ಮ ಸರ್ಕಾರ ಆಡಳಿತದಲ್ಲಿದ್ದಾಗ ಕೇಳಿಬಂದಿದ್ದ ಸ್ವಾಮೀಜಿಗಳ ಫೋನ್‌ ಕದ್ದಾಲಿಕೆಯ […]

ನಿಮ್ಮ ಫೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕಿಲ್ಲ: ಡಾ. ಸುಧಾಕರ್ ತಿರುಗೇಟು
sadhu srinath

|

Aug 21, 2020 | 7:03 PM

ಬೆಂಗಳೂರು: ನಮ್ಮ ಫೋನ್ ಕದ್ದಾಲಿಕೆ ಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಲಾಗಿದ್ದು,ಈ ಆರೋಪಕ್ಕೆ ಸಚಿವ ಸುಧಾಕರ್ ಮುಖಾಂತರ ಟ್ವೀಟ್ ಮುಖಾಂತರ ತಿರುಗೇಟು ನೀಡಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ?

ನಿಮ್ಮ ಸರ್ಕಾರ ಆಡಳಿತದಲ್ಲಿದ್ದಾಗ ಕೇಳಿಬಂದಿದ್ದ ಸ್ವಾಮೀಜಿಗಳ ಫೋನ್‌ ಕದ್ದಾಲಿಕೆಯ ಕೇಸ್‌ ಇನ್ನೂ ಜೀವಂತವಾಗಿದೆ. ಹಾಗಾಗಿ ನಿಮ್ಮ ಫೋನ್‌ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. ನಿಮ್ಮ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ನೀವು ಪ್ರತಿ ಮಾತಿನಲ್ಲೂ ಪ್ರಚಾರ ಬಯಸುತ್ತೀರಲ್ಲಾ, ನಾವು ಅಧಿಕಾರದಲ್ಲಿದ್ದಾಗ ಅನೇಕ ಸ್ವಾಮೀಜಿಗಳ ಫೋನ್‌ ಕದ್ದಾಲಿಕೆ ಮಾಡಿದ್ದೆವುʼ ಎಂಬ ಸತ್ಯ ಹೇಳಿಬಿಡಿ ಡಿಕೆಶಿ ಅವರೇ ಎಂದು ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada