
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ರ ನಿವಾಸದಲ್ಲೇ ಕೆಲಸ ಮಾಡ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸಚಿವರು ಇಂದು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ತಮ್ಮ ಮನೆಯಲ್ಲಿ 82 ವರ್ಷದ ತಂದೆ ಇದ್ದಾರೆ, ಚಿಕ್ಕ ಮಕ್ಕಳಿದ್ದಾರೆ. ಹಾಗಾಗಿ ಕುಟುಂಬದವರೆಲ್ಲರೂ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ.
ಜೊತೆಗೆ ಸಚಿವ ಡಾ.ಕೆ.ಸುಧಾಕರ್ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಇಂದು ಕರೆದಿದ್ದ ತುರ್ತು ಕೋವಿಡ್ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರು ಸಭೆಗೆ ಹಾಜರಾಗಲಿಲ್ಲ ಎಂದು ತಿಳಿದುಬಂದಿದೆ.