ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

ಮೂರನೇ ಅಲೆಯಲ್ಲಿ ಪುನಃ ಪ್ರಕರಣಗಳು ಹೆಚ್ಚಾಗುತ್ತಿದ್ದು ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆಗಳಿಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಸಮಯ ಸಿಕ್ಕಿಲ್ಲ. ಅವರು ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದರಿಂದ ಚಾನ್ಸ್ ತೆಗೆದುಕೊಳ್ಳಲಾಗದು. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ಪರಷ್ಕೃತ ವೇಳಾಪಟ್ಟಿ ಪ್ರಕಟಿಸುವಂತೆ ಡಾ ಸುಧಾಕರ್ ತಮ್ಮ ಪತ್ರದಲ್ಲಿ ಆದೇಶಿಸಿದ್ದಾರೆ

ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ
ಡಾ ಕೆ ಸುಧಾಕರ್
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Feb 01, 2022 | 6:42 PM

ಕೋವಿಡ್ ಮೂರನೇ ಅಲೆಯಲ್ಲಿ ಹೆಚ್ಚುತ್ತಿರುವ ಸೋಂಕಿನ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (RGUHS) ಅಧೀನದಲ್ಲಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಅಂತಿಮ ವರ್ಷದ ಎಮ್ ಬಿ ಬಿ ಎಸ್ (MBBS) ವಿದ್ಯಾರ್ಥಿಗಳು ಒಂದು ವಾರದ ಹಿಂದೆ ನಡೆಸಿದ ವರ್ಚ್ಯೂಯಲ್ ಪ್ರತಿಭಟನೆಗೆ (virtual protest) ವೈದ್ಯಕೀಯ ಶಿಕ್ಷಣ ಸಚಿವ (medical education minister) ಡಾ ಕೆ ಸುಧಾಕರ್ (K Sudhakar) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರವೊಂದನ್ನು ಬರೆದಿರುವ ಸಚಿವರು ಫೆಬ್ರುವರಿಯಲ್ಲಿ ಆರಂಭವಾಗಬೇಕಿದ್ದ ಎಮ್ ಬಿ ಬಿ ಎಸ್ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲು ತಿಳಿಸಿದ್ದಾರೆ. ತರಗತಿಗಳು ವಿಳಂಬವಾಗಿ ಆರಂಭವಾಗಿದ್ದೂ ಅಲ್ಲದೆ ಸೋಂಕಿನ ಪ್ರಕರಣಗಳು ಹೆಚ್ಚಾದಾಗ ಅನ್ ಲೈನಲ್ಲಿ ಕ್ಲಾಸ್ಗಳನ್ನು ನಡೆಸಿದ್ದರಿಂದ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಅವುಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಕಳೆದ ವಾರ ವರ್ಚ್ಯೂಯಲ್ ಪ್ರತಿಭಟನೆ ನಡೆಸಿದ್ದರು.

ರಾಜ್ಯ ಸರ್ಕಾರ ತಮ್ಮ ಮನವಿ ಹಾಗೂ ಪ್ರತಿಭಟನೆ ಇಷ್ಟು ಬೇಗ ಪ್ರತಿಕ್ರಿಯಿಸುತ್ತದೆ ಎಂದು ವಿದ್ಯಾರ್ಥಿಗಳು ಪ್ರಾಯಶಃ ಭಾವಿಸಿರಲಾರರು. ಹಾಗಾಗಿ, ಡಾ ಸುಧಾಕರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವುದು ಅವರಲ್ಲಿ ಅಪಾರ ಸಂತಸ ಮೂಡಿಸಿದೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಧೀನದ ಮೆಡಿಕಲ್ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾದದ್ದು ಮೇ ತಿಂಗಳಲ್ಲಿ ಮತ್ತು ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿದ್ದ ಕಾರಣ ಜುಲೈವರೆಗೆ ಪಾಠಗಳು ಆನ್ಲೈನ್ ನಡೆದಿವೆ. ಇದೇ ಹಿನ್ನೆಲೆಯಲ್ಲಿ ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಷ್ಟು ಮಾತ್ರವಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಎರಡು ತಿಂಗಳು ಕಾಲ‌ ಕೋವಿಡ್ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಎಂದು ಡಾ ಸುಧಾಕರ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಮೂರನೇ ಅಲೆಯಲ್ಲಿ ಪುನಃ ಪ್ರಕರಣಗಳು ಹೆಚ್ಚಾಗುತ್ತಿದ್ದು ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆಗಳಿಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಸಮಯ ಸಿಕ್ಕಿಲ್ಲ. ಅವರು ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದರಿಂದ ಚಾನ್ಸ್ ತೆಗೆದುಕೊಳ್ಳಲಾಗದು. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಅಗತ್ಯವಿರುವಷ್ಟು ಕಾಲಾವಕಾಶ ಒದಗಿಸಿ, ಪರಷ್ಕೃತ ವೇಳಾಪಟ್ಟಿ ಪ್ರಕಟಿಸುವಂತೆ ಡಾ ಸುಧಾಕರ್ ತಮ್ಮ ಪತ್ರದಲ್ಲಿ ಆದೇಶಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷದ ಪರೀಕ್ಷೆಗಳು ಫೆಬ್ರುವರಿ 22 ರಂದು ಆರಂಭವಾಗಬೇಕಿತ್ತು.

ಸಚಿವರ ಪತ್ರ ವಿದ್ಯಾರ್ಥಿಗಳಲ್ಲಿ ಅಪಾರ ಸಂತೋಷವನ್ನುಂಟು ಮಾಡಿದೆ ಮತ್ತು ಮಕ್ಕಳು ಹಗಲು ರಾತ್ರಿ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದುದನ್ನು ಕಂಡು ಅವರ ಆರೋಗ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದ ಪೋಷಕರು ಸಹ ನಿಟ್ಟುಸಿರಾಗಿದ್ದಾರೆ.

ಇದನ್ನೂ ಓದಿ:  ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್​ ಡೋಸ್, ಆಸ್ಪತ್ರೆಗಳಲ್ಲಿ ವಿಐಪಿಗಳ ಪ್ರಭಾವ ನಡೆಯುವುದಿಲ್ಲ; ಸಚಿವ ಡಾ. ಸುಧಾಕರ್

Published On - 6:41 pm, Tue, 1 February 22

Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ