ಹೆಚ್ಚುವರಿ ಡಿಸಿಎಂ ಡಿಶುಂ ಡಿಶುಂ ಮಧ್ಯ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮುನ್ನೆಲೆಗೆ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇವೆ. ಹೆಚ್ಚುವರಿ ಡಿಸಿಎಂ ಪಟ್ಟದ ಫೈಟ್ ಜೋರಾಗೇ ನಡೀತಿದೆ. ಸದ್ಯಕ್ಕೆ ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ ಆಗಿದ್ದು, ಹೆಚ್ಚುವರಿ ಡಿಸಿಎಂ ಸ್ಥಾನ ನೀಡಬೇಕು ಅನ್ನೋ ಕೂಗು ಕೆಪಿಸಿಸಿ ಕಚೇರಿಯಿಂದ ಮುಂದಿನ ಬೀದಿಗೂ ಬಂದುಬಿಟ್ಟಿದೆ. ಕೆಲವರು ಮೂವರು ಡಿಸಿಎಂ ಇರಲಿ ಅಂದ್ರೆ ಇನ್ನು ಕೆಲವರು ಐವರು ಡಿಸಿಎಂ ಆಗಲಿ ಅಂತಿದ್ದಾರೆ. ಇದರ ಮಧ್ಯ ಇದೀಗ ಕೆಪಿಸಿಸಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂಬ ಕೂಗು ಕೇಳಿಬಂದಿದೆ.

ಹೆಚ್ಚುವರಿ ಡಿಸಿಎಂ ಡಿಶುಂ ಡಿಶುಂ ಮಧ್ಯ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮುನ್ನೆಲೆಗೆ
ಡಿಕೆ ಶಿವಕುಮಾರ್
Follow us
|

Updated on: Jun 26, 2024 | 5:51 PM

ಬೆಂಗಳೂರು, (ಜೂನ್ 26): ಕರ್ನಾಟಕ ಕಾಂಗ್ರೆಸ್​​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಡಿಶುಂ ಡಿಶುಂ ಜೋರಾಗಿದೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೊದಲು ಸಚಿವ ಕೆಎನ್ ಡಿಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿ ಕಿಚ್ಚು ಹೊತ್ತಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಾಯಾಸಿದ್ದಾರೆ. ​ಬೆಂಗಳೂರಿನಲ್ಲಿ ಇಂದು (ಜೂನ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ, ಸಿಎಂ, ಡಿಸಿಎಂ ಆಯ್ಕೆ ವೇಳೆ ವರಿಷ್ಠರು ಏನು ಹೇಳಿದ್ದರು? ಸಿದ್ದರಾಮಯ್ಯ ಸಿಎಂ, ಡಿಕೆ ಡಿಸಿಎಂ ಎಂದು ಮಾಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷರು ಚುನಾವಣೆವರೆಗೆ ಮುಂದುವರಿಕೆ ಅಂದಿದ್ರು. ಅದನ್ನ ನೆನಪಿಸಿಕೊಳ್ಳಲು ಒತ್ತಾಯಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಈಗ ಲೋಕಸಭೆ ಚುನಾವಣೆ ಮುಗಿದಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಚರ್ಚೆಗೆ ನಾಂದಿ ಹಾಡಿದ್ದ ಡಿಕೆ ಶಿವಕುಮಾರ್

‘ನಾನು ಇನ್ನೆಷ್ಟು ದಿನ ಕೆಪಿಸಿಸಿ ಅಧ್ಯಕ್ಷನಾಗಿ ಇರುತ್ತೇನೋ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ನೀಡಿದ್ದ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗಳಿಗೆ ಗ್ರಾಸವಾಗಿದೆ. ಬೆಂಗಳೂರು ಗ್ರಮಾಂತರ ಲೋಕಸಭಾ ಚುನಾವಣೆ ಸೋಲುಕಂಡಿರುವ ತಮ್ಮ ಸಹೋದರ ಡಿಕೆ ಸುರೇಶ್​​ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಕಟ್ಟಲು ಡಿಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವ ಚರ್ಚೆಯೂ ಸಹ ನಡೆದಿದ್ದವು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶುರುವಾಯ್ತು ಪ್ಲ್ಯಾನ್; ಹೆಚ್ಚುವರಿ ಡಿಸಿಎಂ ಆಗ್ರಹದ ಹಿಂದಿದೆ ಭರ್ಜರಿ ತಂತ್ರ!

ಆದರೆ, ಪಕ್ಷದ ನಂಬಲರ್ಹ ಮೂಲಗಳ ಪ್ರಕಾರ ಕನಿಷ್ಠ ಈ ವರ್ಷಾಂತ್ಯದವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಸಾಧ್ಯ. ಅದರಲ್ಲೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸುವ ದಿಸೆಯಲ್ಲಿ ಚಿಂತಿಸುತ್ತಿರುವ ಕಾಂಗ್ರೆಸ್‌ ನಾಯಕತ್ವ ಈ ಹಂತದಲ್ಲಿ ಅಧ್ಯಕ್ಷರ ಬದಲಾವಣೆಯಂತಹ ಸರ್ಕಸ್‌ಗೆ ಕೈ ಹಾಕುವ ಸಾಧ್ಯತೆಯೇ ಇಲ್ಲ. ಹೀಗಿದ್ದರೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರೇ ಇಂತಹದೊಂದು ಹೇಳಿಕೆ ನೀಡಿದ್ದು ಏಕೆ ಎಂಬ ಬಗ್ಗೆ ಪಕ್ಷದ ವಲಯದಲ್ಲಂತೂ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಶಿವಕುಮಾರ್‌ ಅವರ ಆಪ್ತ ಮೂಲಗಳ ಪ್ರಕಾರ, ಬೆಂಗಳೂರು ನಗರಾಭಿವೃದ್ದಿ ಹಾಗೂ ಜಲಸಂಪನ್ಮೂಲ ಖಾತೆಯಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಶಿವಕುಮಾರ್‌ ಅವರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಅಲ್ಲದೆ, ಕಾಂಗ್ರೆಸ್‌ ಹೈಕಮಾಂಡ್‌, ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ನೀವೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿರ್ವಹಿಸಿ ಎಂಬ ಸೂಚನೆಯನ್ನು ಚುನಾವಣೆ ಪೂರ್ವದಲ್ಲಿ ಶಿವಕುಮಾರ್‌ ಅವರಿಗೆ ನೀಡಿತ್ತು.

ಈಗ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿರುವುದರಿಂದ ಹೈಕಮಾಂಡ್‌ ಸೂಚಿಸಿದ್ದ ಅವಧಿ ಮುಗಿದಿದೆ. ಜತೆಗೆ, ಹುದ್ದೆಗೆ ಬಂದೂ ನಾಲ್ಕು ವರ್ಷವೂ ಆಗಿದೆ. ಈ ಎಲ್ಲ ಕಾರಣಗಳಿಗಾಗಿ ತಾವು ಈ ಹುದ್ದೆಯ ಹೊಣೆಗಾರಿಕೆಯನ್ನು ಬೇರೆಯವರಿಗೆ ಬಿಟ್ಟುಕೊಡಲು ಸಿದ್ಧ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸುವ ಏಕ ಮಾತ್ರ ಉದ್ದೇಶದಿಂದ ಶಿವಕುಮಾರ್‌ ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಹೈಕಮಾಂಡ್‌ ಬಯಸಿದರೆ ಹುದ್ದೆ ಬಿಟ್ಟುಕೊಡುವ ಮನಸ್ಸೂ ಅವರಿಗೆ ಇದೆ ಎಂದು ಹೇಳುತ್ತವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ನೀಡುವಂತೆ ಒತ್ತಾಯ

ಇದೀಗ ಕೆಎನ್​ ರಾಜಣ್ಣ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಮಾಡಬೇಕೆನ್ನುವ ಧ್ವನಿ ಎತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಲಿಂಗಾಯತ ಶಾಸಕರು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ತಮ್ಮ ಸಮುದಾಯಕ್ಕೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಹೈಕಮಾಂಡ್​ ಬಳಿ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ನಾಯಕರ ನಡುವೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇವೆ. ಸದ್ಯ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯ ಇದೀಗ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕೂಗು ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!