AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಈಗ ಜಯಪ್ರಕಾಶ್ ಹೆಗಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಅವರ ಸುಪರ್ದಿಯಲ್ಲಿಯೇ ಜಾತಿಗಣತಿ ವರದಿಯ ಕಡತಗಳಿವೆ. ಆಯೋಗ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಬೇಕಾಗಿದೆ ಎಂದು ಅವರು ತಿಳಿಸಿದರು.

ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on:Aug 19, 2021 | 6:56 PM

Share

ಬೆಂಗಳೂರು: ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, ವರದಿ ಬಿಡುಗಡೆಗೆ ಸರ್ಕಾರಕ್ಕೆ ಮುಕ್ತ ಮನಸ್ಸಿದೆ, ಸರ್ಕಾರ ವರದಿ ಬಿಡುಗಡೆ ಮಾಡಲು ಮುಕ್ತ ಮನಸ್ಸಿನಿಂದ ಸಿದ್ಧವಿದೆ ಎಂದು ಬೆಂಗಳೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅತಿ‌ ಹಿಂದುಳಿದ ವರ್ಗಗಳ ಸಭೆ ನಡೆಸಿದ ಬಳಿದ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತಾರೆಂದು ತಿಳಿದಿದ್ದೆವು. ಆದರೆ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ಈಗ ಜಯಪ್ರಕಾಶ್ ಹೆಗಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಅವರ ಸುಪರ್ದಿಯಲ್ಲಿಯೇ ಜಾತಿಗಣತಿ ವರದಿಯ ಕಡತಗಳಿವೆ. ಆಯೋಗ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಬೇಕಾಗಿದೆ. ಆಯೊಗ ಸರ್ಕಾರಕ್ಕೆ ವರದಿ ನೀಡಿದರೆ ಅದು ಬಿಡುಗಡೆಯಾದಂತೆಯೇ ಲೆಕ್ಕ. ಆದರೆ ಸರ್ಕಾರಕ್ಕೆ ವರದಿ ಸಲ್ಲಿಸಲು ಕಡತದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿಯಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪ್ರಬಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಡಿ; ಜಾತಿ ಗಣತಿ ಆಧರಿಸಿ ಬಜೆಟ್ ಮಂಡಿಸಿ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ ಶಾಸಕರ ಭವನದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಸಭೆ ನಡೆಸಿ,ಜಾತಿ ಗಣತಿ ವರದಿ ಸ್ವೀಕರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಜತೆಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಸ್ಥಾನಮಾನ‌ ನೀಡಲು ವಿರೋಧ ವ್ಯಕ್ತಪಡಿಸಿತು. ಪಂಚಮಸಾಲಿ ಸಮುದಾಯ ಈಗಾಗಲೇ ಮುಂದುವರಿದ ಸಮುದಾಯವಾಗಿದ್ದು,  ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸದಂತೆ ಆಯೋಗ ಮನವಿ ಸಲ್ಲಿಸಿತು. ಪಂಚಮಸಾಲಿ 2ಎಗೆ ಸೇರ್ಪಡೆ ಮಾಡಲು ರಚಿಸಿದ್ದ ನ್ಯಾಯಮೂರ್ತಿ ಸುಭಾಷ್ ಆಡಿ ಆಯೋಗದ ಬಗ್ಗೆಯೂ ವೇದಿಕೆ ಆಕ್ಷೇಪ ವ್ಯಕ್ತಪಡಿಸಿತು. ಆಯೋಗದ ಎರಡು ಸದಸ್ಯರು ಬಿಜೆಪಿ ಸದಸ್ಯರು, ನ್ಯಾಯಮೂರ್ತಿ ಕೂಡ ಪಂಚಮಸಾಲಿ ಸಮುದಾಯ ಆಗಿರುವ ಹಿನ್ನಲೆ ವೇದಿಕೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಆಕ್ಷೇಪಿಸಿತು. ಜಾತಿ ಗಣತಿಯಿಂದ ಜಾತಿಗಳ ಅಂಕಿಅಂಶ ಸಿಗಲಿದೆ. ಹೀಗಾಗಿ ಜಾತಿ ಗಣತಿ ಸ್ವೀಕರಿಸಿ, ಜಾತಿ ಗಣತಿ ಆಧಾರದಲ್ಲೇ ಬಜೆಟ್ ಮಂಡಿಸುವಂತೆ ವೇದಿಕೆ ಒತ್ತಾಯಿಸಿತು.

ಹಿಂದುಳಿದ ವರ್ಗಗಳ ಮೀಸಲಾತಿ ವರ್ಗೀಕರಣ ಮಾಡಬೇಕು. ಇದರಿಂದ ಅತಿ ಹಿಂದುಳಿದ ವರ್ಗಗಳಿಗೂ ಸಮಾನತೆ ಸಿಗಲಿದೆ. ರಾಜ್ಯದಲ್ಲಿ 160ಕ್ಕೂ ಹೆಚ್ಚು ಸಣ್ಣಪುಟ್ಟ ಜಾತಿಯವರು ಇದ್ದಾರೆ. ಇಂಥವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಾತಿಗಣತಿ ವರದಿ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇವೆ. ಈಗಿರುವ ಶೇಕಡಾ 50ರಷ್ಟು ಮೀಸಲಾತಿ ತೆಗೆಯಬೇಕು, ಜಾತಿ, ಪ್ರವರ್ಗಗಳನ್ನು ವರ್ಗೀಕರಣ ಮಾಡಬೇಕು. ತಮಿಳುನಾಡಿನಲ್ಲಿರುವಂತೆ ಶೇ.73ರಷ್ಟು ಮೀಸಲಾತಿ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ಡಾ.ಎಸ್.ದ್ವಾರಕನಾಥ್ ತಿಳಿಸಿದರು.

ಇದೇ ವೇಳೆ ಮಾಧ್ಯಮಗಳ ಜತೆಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಪಂಚಮಸಾಲಿಗರ ಒತ್ತಡಕ್ಕೆ ಸಿಲುಕಿ ಮೀಸಲಾತಿ ನೀಡಬಾರದು. ಅವರಿಗೆ ಮೀಸಲಾತಿ ನೀಡಿದರೆ ನಾವೂ ಹೋರಾಟ ಮಾಡುತ್ತೇವೆ. ಇದನ್ನೇ ಮುಖ್ಯಮಂತ್ರಿಗಳಿಗೂ ತಿಳಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 

Census India: ಜನಗಣತಿಗೆ ಸಿದ್ಧತೆ: ಮತ್ತೊಮ್ಮೆ ಜಾತಿ ಆಧರಿತ ಮಾಹಿತಿ ಸಂಗ್ರಹಿಸುವ ಉದ್ದೇಶವಿಲ್ಲ ಎಂದ ಕೇಂದ್ರ ಸರ್ಕಾರ

ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

(Minister Kota Shrinivas Poojary says Karnataka government is open minded to the release of the Census Report)

Published On - 5:26 pm, Thu, 19 August 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ