AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ

ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. 

ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
ಕೋಟ ಶ್ರೀನಿವಾಸ ಪೂಜಾರಿ
TV9 Web
| Updated By: guruganesh bhat|

Updated on:Sep 11, 2021 | 2:58 PM

Share

ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. 

ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, ವರದಿ ಬಿಡುಗಡೆಗೆ ಸರ್ಕಾರಕ್ಕೆ ಮುಕ್ತ ಮನಸ್ಸಿದೆ, ಸರ್ಕಾರ ವರದಿ ಬಿಡುಗಡೆ ಮಾಡಲು ಮುಕ್ತ ಮನಸ್ಸಿನಿಂದ ಸಿದ್ಧವಿದೆ ಎಂದು ಬೆಂಗಳೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಳೆದ ಏಪ್ರಿಲ್ 19ರಂದು  ಅತಿ‌ ಹಿಂದುಳಿದ ವರ್ಗಗಳ ಸಭೆ ನಡೆಸಿದ ಬಳಿದ ಸ್ಪಷ್ಟಪಡಿಸಿದ್ದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತಾರೆಂದು ತಿಳಿದಿದ್ದೆವು. ಆದರೆ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ಈಗ ಜಯಪ್ರಕಾಶ್ ಹೆಗಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಅವರ ಸುಪರ್ದಿಯಲ್ಲಿಯೇ ಜಾತಿಗಣತಿ ವರದಿಯ ಕಡತಗಳಿವೆ. ಆಯೋಗ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಬೇಕಾಗಿದೆ. ಆಯೊಗ ಸರ್ಕಾರಕ್ಕೆ ವರದಿ ನೀಡಿದರೆ ಅದು ಬಿಡುಗಡೆಯಾದಂತೆಯೇ ಲೆಕ್ಕ. ಆದರೆ ಸರ್ಕಾರಕ್ಕೆ ವರದಿ ಸಲ್ಲಿಸಲು ಕಡತದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿಯಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದರು.

ಇದನ್ನೂ ಓದಿ: ಹಾಸ್ಟೆಲ್​ನಲ್ಲಿ ಕೇಕ್​ ಕಟ್​ ಮಾಡಿ, ವಿದ್ಯಾರ್ಥಿನಿಯ ಬರ್ಥ್ ​​ಡೆ ಆಚರಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ 

ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನಮ್ಮ ಗುರಿ: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

(Minister Kota Srinivas Poojari nominated as Vidhana Parishad leader)

Published On - 2:46 pm, Sat, 11 September 21