17,901 ಕೋಟಿ ರೂ.ಗೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ: ಸಚಿವ ಕೃಷ್ಣ ಭೈರೇಗೌಡ ಮಾಹಿತಿ

ಕೇಂದ್ರದ ಅಧಿಕಾರಿಗಳು ರಾಜ್ಯಕ್ಕೆ ಬಂದು ಅಧ್ಯಯನ ಕೂಡ ಮಾಡುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಕೇಂದ್ರದ ಅಧಿಕಾರಿಗಳ ತಂಡ ವರದಿ ಸಲ್ಲಿಸಬಹುದು. ಆದಷ್ಟು ಬೇಗ ಹಣ ಬಿಡುಗಡೆ ಆಗಬೇಕು ಅಂತಾ ಮನವಿ ಮಾಡಿದ್ದೇವೆ. ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.

17,901 ಕೋಟಿ ರೂ.ಗೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ: ಸಚಿವ ಕೃಷ್ಣ ಭೈರೇಗೌಡ ಮಾಹಿತಿ
ಸಚಿವ ಕೃಷ್ಣ ಭೈರೇಗೌಡ (ಸಂಗ್ರಹ ಚಿತ್ರ)
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Oct 25, 2023 | 5:08 PM

ನವದೆಹಲಿ, ಅಕ್ಟೋಬರ್ 25: ಬರದ ಕಾರಣ 17,901 ಕೋಟಿ ಬಿಡುಗಡೆ (Drought Relief) ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ತಿಳಿಸಿದರು. ದೆಹಲಿಯಲ್ಲಿ ಮಾತನಾಡಿದ ಅವರು, ಜೂನ್​ನಲ್ಲಿ ಶೇ 56ರಷ್ಟು ಮಳೆ ಕೊರತೆ, ಜುಲೈನಲ್ಲಿ ಶೇ 29ರಷ್ಟು ಮಳೆ ಕೊರತೆ, ಆಗಸ್ಟ್​​ನಲ್ಲಿ ಶೇ 73 ರಷ್ಟು ಮಳೆ ಕೊರತೆ, ಸೆಪ್ಟೆಂಬರ್​ನಲ್ಲಿ ಶೇ 26ರಷ್ಟು ಮಳೆ ಕೊರತೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಶೇ 63 ರಷ್ಟು ಮಳೆ ಕೊರತೆ ಆಗಿದೆ ಎಂದರು.

ಒಟ್ಟು 216 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಮೊದಲ ಸುತ್ತಿನಲ್ಲಿ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. 2ನೇ ಸುತ್ತಿನಲ್ಲಿ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪಶು ಸಂಗೋಪನೆ ಚಟುವಟಿಕೆಗಳಿಗೆ 355 ಕೋಟಿ ರೂ. ನೀಡಲು ಮನವಿ ಮಾಡಿದ್ದೇವೆ. ಡಿಸೆಂಬರ್​ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಒಟ್ಟು 17901 ಕೋಟಿ ರೂ. ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಸಕಾರಾತ್ಮಕ ಸ್ಪಂದನೆ ದೊರೆತಿದೆ: ಕೃಷ್ಣ ಭೈರೇಗೌಡ

ಕೇಂದ್ರದ ಅಧಿಕಾರಿಗಳು ರಾಜ್ಯಕ್ಕೆ ಬಂದು ಅಧ್ಯಯನ ಕೂಡ ಮಾಡುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಕೇಂದ್ರದ ಅಧಿಕಾರಿಗಳ ತಂಡ ವರದಿ ಸಲ್ಲಿಸಬಹುದು. ಆದಷ್ಟು ಬೇಗ ಹಣ ಬಿಡುಗಡೆ ಆಗಬೇಕು ಅಂತಾ ಮನವಿ ಮಾಡಿದ್ದೇವೆ. ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 600 ಕೋಟಿ ರೂ. ಬಿಡುಗಡೆಗೆ ಮನವಿ: ಪ್ರಿಯಾಂಕ್ ಖರ್ಗೆ

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಹಣ ಬರಬೇಕಿದೆ. ಈ ಯೋಜನೆಯಲ್ಲಿ ಕೆಲಸ ಮಾಡಿದವರಿಗೆ ಹಣ ಕೊಡೋಕೆ ಆಗ್ತಾ ಇಲ್ಲಾ. ಅಂದಾಜು 600 ಕೋಟಿ ರೂ ಹಣ ಬರಬೇಕಿದೆ. ಇದು ಮೊನ್ನೆ ದಸರಾ ಹಬ್ಬಕ್ಕೂ ಮುಂಚೆ ಅಂದಾಜು ಮಾಡಲಾಗಿದ್ದು, ಈ ಹಣ ಬಿಡುಗಡೆ ಮಾಡಬೇಕು ಅಂತ ಮನವಿ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಈಗಾಗಲೇ ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಬರ ಇರೋ ಕಾರಣದಿಂದ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಮಾಡೋಕೆ ಜನ ಮುಂದಾಗ್ತಾರೆ. ಬರ ಘೋಷಣೆ ಆದ ಬಳಿಕ 100 ರಿಂದ 150 ದಿನಕ್ಕೆ ಹೆಚ್ಚಳ ಮಾಡಬೇಕು. ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಸಹ ನಾವು ವಿವರಣೆ ನೀಡಿದ್ದೇವೆ. ಗ್ರಾಮೀಣ ಭಾಗದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲಾ. ಇದಕ್ಕೆ ಬೇಕಾದ ಹಣ ಬಿಡುಗಡೆ ಮಾಡಿ ಕುಡಿಯುವ ನೀರಿನ ವ್ಯವಸ್ಥೆ ಗ್ರಾಮೀಣ ಪ್ರದೇಶದಲ್ಲಿ ಮಾಡಲಾಗಿದೆ. 340.02 ಕೋಟಿ ರೂ. ಗ್ರಾಮೀಣ ಪ್ರದೇಶದ ಕುಡಿಯುವ ನೀರಿಗಾಗಿ ಹಾಗೂ 213 ಕೋಟಿ ರೂ. ನಗರ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:06 pm, Wed, 25 October 23