ಶಿವಮೊಗ್ಗ: ಕೊರೊನಾ ಎರಡನೇ ಅಲೆ ಜೋರಾಗಿದ್ದರೂ ಕೂಡಾ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಗಂಭೀರವಾಗಿ ಜಾರಿಯಾಗಿಲ್ಲ. ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಲಾಠಿ ಬೀಸುತ್ತಿರೋ ಅಥವಾ ಕೇಸ್ ದಾಖಲಿಸುತ್ತಿರೋ ನಿಮಗೆ ಬಿಟ್ಟಿದ್ದು, ನಿಯಮ ಪಾಲಿಸದಿದ್ದರೆ ಕ್ರಮ ಕಠಿಣವಾಗಿರಲಿ. ಇದೇ ರೀತಿ ಕೊವಿಡ್ ನಿಯಮ ಉಲ್ಲಂಘಿಸುತ್ತಿದ್ದರೆ ಸಮಸ್ಯೆ ಗಂಭೀರವಾಗುತ್ತದೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಷ್ವಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಅವಧಿ ಮುಗಿಯದಿದ್ದರೂ ಸಂಚಾರ ಮುಂದುವರಿಕೆ ಏಕೆ? ಜನರ ನಿರ್ಲಕ್ಷ್ಯ ತೋರುತ್ತಿದ್ದರೆ ಕ್ರಮ ಕೈಗೊಳ್ಳಿ. ಜಿಲ್ಲೆಯಲ್ಲಿ ಕರ್ಫ್ಯೂ ಇದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಸಭೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು
ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಸ್ಪೋಟಗೊಳ್ಳುತ್ತಿದೆ. ಈಗಾಗಲೇ 10ಕ್ಕೂ ಹೆಚ್ಚು ಜನರು ಬಲಿಯಾಗುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿರುವ ಕೊವಿಡ್ ವ್ಯವಸ್ಥೆಗಳ ಪರಿಶೀಲನೆಗೆ ಏಪ್ರಿಲ್ 27 ರಂದು ಬಿಜೆಪಿ ಶಾಸಕ ರುದ್ರೇಗೌಡರು ಮತ್ತು ಆಯನೂರು ಮಂಜುನಾಥ್ ಆಗಮಿಸಿದ್ದು, ಜಿಲ್ಲಾಸ್ಪತ್ರೆಯ ಅಧೀಕ್ಷ ಡಾ. ಶ್ರೀಧರ್ ಅವರಿಂದ ಕೊವಿಡ್ ಸೋಂಕಿತರ ಚಿಕಿತ್ಸೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.
ಈ ವೇಳೆ ಕೊವಿಡ್ ಆಸ್ಪತ್ರೆಯಲ್ಲಿರುವ ಕೆಲವೊಂದು ಅವ್ಯವಸ್ಥೆಗಳು ಬಹಿರಂಗವಾಗಿದೆ. ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಊಟ ಮತ್ತು ಇತರೆ ಎಲ್ಲಾ ವ್ಯವಸ್ಥೆಗಳನ್ನು ಕುಟುಂಬದ ಸದಸ್ಯರೇ ಮಾಡುತ್ತಿದ್ದಾರೆ. ಅದರಲ್ಲೂ ಕೊವಿಡ್ ಆಸ್ಪತ್ರೆಯ ಒಳಗೆ ಹೋಗಿ ನೆರವಾಗಿ ಮಾತನಾಡುತ್ತಿರುವ ದೃಶ್ಯಗಳು ಕಂಡು ಬಂದಿವೆ. ಪಿಪಿಇ ಕಿಟ್ ಧರಿಸದೇ ಹೀಗೆ ಸೋಂಕಿತರ ಸಂಬಂಧಿಗಳು ಕೊವಿಡ್ ಆಸ್ಪತ್ರೆಯಲ್ಲಿ ಓಡಾಡಿಕೊಂಡಿದ್ದಾರೆ. ಇನ್ನೂ ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ನರ್ಸ್ಗಳ ಕೊರತೆಯಿಂದ ಸೋಂಕಿತರ ಆರೈಕೆ ಖುದ್ದಾಗಿ ಸಂಬಂಧಿಗಳೇ ಮಾಡುತ್ತಿರುವ ಅಚ್ಚರಿ ಸಂಗತಿಗಳು ಸಿಸಿ ಕ್ಯಾಮರಾ ಮೂಲಕ ಬಹಿರಂಗವಾಗಿದೆ. ಇದನ್ನು ನೋಡಿದ ಬಿಜೆಪಿ ಶಾಸಕ ರುದ್ರೇಗೌಡರು ಮತ್ತು ಆಯನೂರು ಮಂಜುನಾಥ್ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.