AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಮೊದಲೇ ಕಾಂಗ್ರೆಸ್​​ನ ಪಂಚ ಕೌರವರು ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣ್ತಿದಾರೆ: ಸಚಿವ ಕೆಎಸ್ ಈಶ್ವರಪ್ಪ

KS Eshwarappa: ರಾಜ್ಯದ ಜನರು ಪಾಂಡವರನ್ನು ಇಷ್ಟ ಪಡುತ್ತಾರೆ. ಧರ್ಮ ಉಳಿಸುವ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುತ್ತಾರೆ. ಧರ್ಮ ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ಅಧಿಕಾರಕ್ಕೆ ತರುವುದಿಲ್ಲ. ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ತಿರುಗೇಟು ನೀಡಿದರು.

ಚುನಾವಣೆ ಮೊದಲೇ ಕಾಂಗ್ರೆಸ್​​ನ ಪಂಚ ಕೌರವರು ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣ್ತಿದಾರೆ: ಸಚಿವ ಕೆಎಸ್ ಈಶ್ವರಪ್ಪ
ಚುನಾವಣೆ ಮೊದಲೇ ಕಾಂಗ್ರೆಸ್​​ನ ಪಂಚ ಕೌರವರು ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣ್ತಿದಾರೆ: ಸಚಿವ ಕೆಎಸ್ ಈಶ್ವರಪ್ಪ
TV9 Web
| Edited By: |

Updated on: Jul 05, 2021 | 3:55 PM

Share

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಪಕ್ಷಗಳಿಗೆ ಹೋದವರನ್ನು ಘರ್​​ವಾಪಸಿ ಮಾದರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ಮತ್ತೆ ಪಕ್ಷಕ್ಕೆ ಆಹ್ವಾನಿಸಿರುವ ವಿಚಾರವಾಗಿ ಸಚಿವ ಕೆ.ಎಸ್​. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಳಯ ಆದ್ರೂ ಸೇರಿಸಿಕೊಳ್ಳಲ್ಲ ಅಂತಾ ಸಿದ್ದರಾಮಯ್ಯ ಹೇಳ್ತಾರೆ; ಸತ್ತು ಹೋಗಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರಾದ್ರೂ ಸೇರಿಕೊಳ್ತಾರಾ?: ಪ್ರಳಯ ಆದ್ರೂ ಸೇರಿಸಿಕೊಳ್ಳಲ್ಲ ಅಂತಾ ಸಿದ್ದರಾಮಯ್ಯ ಹೇಳ್ತಾರೆ; ಆದರೆ ಡಿಕೆ ಶಿವಕುಮಾರ್​ ಹೇಳ್ತಾರೆ ಯಾರು ಬೇಕಾದರೂ ಬನ್ನಿ ಅಂತಾ! ಇದು ಕಾಂಗ್ರೆಸ್ ಪಕ್ಷದ ದ್ವಂದ್ವ ನೀತಿ. ಕಾಂಗ್ರೆಸ್ ನವರ ಬಹಿರಂಗ ಬೆತ್ತಲು ರಾಜಕಾರಣ ಇದು. ಸಿದ್ದರಾಮಯ್ಯ ಆ 17 ಜನ ತೆಗೆದುಕೊಳ್ಳಲ್ಲ ಅಂತಾ.. ಡಿಕೆಶಿ ಹೇಳ್ತಾರೆ ಯಾರೂ ಬೇಕಾದ್ರೂ ಬನ್ನಿ ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ತಯಾರಿದ್ದೇವೆ ಅಂತಾರೆ. ನಿಮ್ಮನ್ನು ಮೂಸಿರುವವರು ಯಾರು? ಅರ್ಜಿ ಹಾಕೋಕೆ ಯಾರಾದ್ರೂ ತಯಾರಿದ್ದಾರಾ? ಸತ್ತು ಹೋಗಿರುವ ಪಕ್ಷ ಕಾಂಗ್ರೆಸ್. ಸತ್ತು ಹೋಗಿರುವ ಕಾಂಗ್ರೆಸ್ ಪಕ್ಷಕ್ಕೆ ಯಾರಾದ್ರೂ ಸೇರಿಕೊಳ್ಳುತ್ತಾರೆ? ಎಂದು ಸಚಿವ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಭದ್ರಾವತಿ ತಾಲೂಕಿನ ಬಿಆರ್​ಪಿ ಭದ್ರಾ ಜಲಾಶಯದ ಬಳಿ ಸಚಿವ ಕೆ ಎಸ್ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಶಿವಕುಮಾರ್​ ಅವರ ಇತ್ತೀಚಿನ ಹೇಳಿಕೆಯನ್ನು ಹೀಗೆ ವ್ಯಾಖ್ಯಾನಿಸಿದರು.

ಇನ್ನು, ತಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಈಶ್ವರಪ್ಪ ಯಾರು ಯಾರೋ ಏನೇನೋ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡೋಕೆ ಇಲ್ಲ. ಬಿಜೆಪಿ ಪಕ್ಷದ ಇಬ್ಬರು ಮೂವರು ಶಾಸಕರು ಅಲ್ಲೊಂದು ಇಲ್ಲೊಂದು ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನನಗೆ ತುಂಬಾ ನೋವಾಗಿದೆ. ನಮ್ಮ ಪಕ್ಷದಲ್ಲಿ ಇಂತಹ ಬೆಳವಣಿಗೆ ಇರಲಿಲ್ಲ. ಅವರಿಗೆ ಬುದ್ಧಿ ಹೇಳುವ ಕೆಲಸ ಮಾಡುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.

ಚುನಾವಣೆ ಮೊದಲೇ ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣುತ್ತಿದ್ದಾರೆ: ಚುನಾವಣೆ ಮೊದಲೇ ಕಾಂಗ್ರೆಸ್ ಪಕ್ಷದ ಸಿದ್ದರಮಾಯ್ಯ, ಡಿಕೆ ಶಿವಕುಮಾರ್, ಡಾ. ಪರಮೇಶ್ವರ್, ತನ್ವೀರ್ ಸೇಠ್, ಎಂ.ಬಿ ಪಾಟೀಲ್ ಪಂಚ ಕೌರವರು ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣುತ್ತಿದ್ದಾರೆ. ರಾಜ್ಯದ ಜನರು ಪಾಂಡವರನ್ನು ಇಷ್ಟ ಪಡುತ್ತಾರೆ. ಧರ್ಮ ಉಳಿಸುವ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುತ್ತಾರೆ. ಧರ್ಮ ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ಅಧಿಕಾರಕ್ಕೆ ತರುವುದಿಲ್ಲ. ಕಾಂಗ್ರೆಸ್ ಪಕ್ಷ ಈ ಜನ್ಮದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ತಿರುಗೇಟು ನೀಡಿದರು.

(minister ks eshwarappa on political developments in karnataka congress)

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ