ಗ್ರಾಮ ಪಂಚಾಯತಿ ಸದಸ್ಯರಿಗೆ ಇಂದಿನಿಂದ ತರಬೇತಿ: ಅಧ್ಯಕ್ಷರು, ಉಪಾಧ್ಯಕ್ಷರಿಗೆ ಪ್ರತ್ಯೇಕ ತರಬೇತಿ- ಸಚಿವ ಈಶ್ವರಪ್ಪ

ತಾಲೂಕು ಪಂಚಾಯತ್ ಗಳಿಂದ ಉಪಯೋಗ ಆಗ್ತಿಲ್ಲ ಎಂದು ಚರ್ಚೆ ಆಗ್ತಿದೆ. ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಸಾಕು ಎನ್ನುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ‌ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿಕೊಡಲಾಗುತ್ತದೆ. ನೋಡೋಣ, ಕೇಂದ್ರ ಸರ್ಕಾರ ಯಾವ ರೀತಿ ತೀರ್ಮಾನ ಮಾಡುತ್ತದೋ ಅಂತಾ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯರಿಗೆ ಇಂದಿನಿಂದ ತರಬೇತಿ: ಅಧ್ಯಕ್ಷರು, ಉಪಾಧ್ಯಕ್ಷರಿಗೆ ಪ್ರತ್ಯೇಕ ತರಬೇತಿ- ಸಚಿವ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
Follow us
shruti hegde
|

Updated on:Feb 16, 2021 | 3:51 PM

ಬೆಂಗಳೂರು: ತಾಲೂಕು ಪಂಚಾಯತ್ ಗಳಿಂದ ಉಪಯೋಗ ಆಗ್ತಿಲ್ಲ ಎಂದು ಚರ್ಚೆ ಆಗ್ತಿದೆ. ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಸಾಕು ಎನ್ನುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ‌ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿಕೊಡಲಾಗುತ್ತದೆ. ನೋಡೋಣ, ಕೇಂದ್ರ ಸರ್ಕಾರ ಯಾವ ರೀತಿ ತೀರ್ಮಾನ ಮಾಡುತ್ತದೋ ಅಂತಾ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದು, ಇತ್ತೀಚೆಗೆ ಆಯ್ಕೆಗೊಂಡಿರುವ ನೂತನ ಗ್ರಾಮ ಪಂಚಾಯತ್​ ಸದಸ್ಯರುಗಳಿಗೆ ಇಂದಿನಿಂದ ತರಬೇತಿ ನೀಡುತ್ತೇವೆ  ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡುತ್ತಿದ್ದ ಅವರು 5,728 ಗ್ರಾ.ಪಂ.ಗೆ 90,729 ಸದಸ್ಯರು ಆಯ್ಕೆಯಾಗಿದ್ದಾರೆ. ತರಬೇತಿ ಮೂಲಕ ಅಧಿಕಾರದ ಬಗ್ಗೆ ಮಾಹಿತಿ ನೀಡುತ್ತೇವೆ. 5 ದಿನಗಳಲ್ಲಿ 850 ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡುತ್ತಾರೆ. ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರಿಗೂ ಪ್ರತ್ಯೇಕ ತರಬೇತಿ ನೀಡಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ? -ಸಚಿವರ ನಡೆಗೆ ಡಿ.ಕೆ.ಶಿವಕುಮಾರ್ ಶಾಕ್​

ಈ ಕುರಿತು 23 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ. ಹಾಗೂ ಇದಕ್ಕಾಗಿ 15ನೇ ಹಣಕಾಸು ಆಯೋಗದಿಂದಲೂ ಅನುದಾನ ಬರುತ್ತದೆ. 1 ರಿಂದ 1.5 ಕೋಟಿ ರೂಪಾಯಿ ಅನುದಾನ ಸಿಗುತ್ತದೆ. ಹಾಗೂ ವಿದ್ಯುತ್ ಸಮಸ್ಯೆ ಆಗದಂತೆ ಸೋಲಾರ್ ವ್ಯವಸ್ಥೆ ಮಾಡುತ್ತಿದ್ದೇವೆ. ಸದ್ಯಕ್ಕೆ ಏಪ್ರೀಲ್‌, ಮೇನಲ್ಲಿ ನಡೆಯಬಹುದಾದ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ನಡೆಯಲಿದೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

Published On - 3:16 pm, Tue, 16 February 21

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು