ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಬೈಗುಳ ಪದ ಬಳಸಿದ ಸಚಿವ ಕೆ.ಎಸ್. ಈಶ್ವರಪ್ಪ
ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಶಬ್ದ ಬಳಸಿ ಮಾತನಾಡಿದ ಸಚಿವ ಈಶ್ವರಪ್ಪ ಕಟುವಾದ ಅವಾಚ್ಯ ಬೈಗುಳ ಪದ ಪ್ರಯೋಗ ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಕ್ಷಣ ಪ್ರತಿಕ್ರಿಯಿಸಿದ್ದು, ತಿರುಗೇಟು ನೀಡಿದ್ದಾರೆ. ಆದಷ್ಟು ಬೇಗ ಈಶ್ವರಪ್ಪರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಶಬ್ದ ಬಳಸಿ ಮಾತನಾಡಿದ ಸಚಿವ ಈಶ್ವರಪ್ಪ ಕಟುವಾದ ಅವಾಚ್ಯ ಬೈಗುಳ ಪದ ಪ್ರಯೋಗ ಮಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಕ್ಷಣ ಪ್ರತಿಕ್ರಿಯಿಸಿದ್ದು, ತಿರುಗೇಟು ನೀಡಿದ್ದಾರೆ. ಆದಷ್ಟು ಬೇಗ ಈಶ್ವರಪ್ಪರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಆದಷ್ಟು ಬೇಗ ಈಶ್ವರಪ್ಪರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು: ಸಚಿವ ಕೆ.ಎಸ್.ಈಶ್ವರಪ್ಪ ಸಿಎಂ ಆಗಲು ಪ್ರಯತ್ನಿಸಿದ್ದರು. ಕೊನೆಗೆ ಡಿಸಿಎಂ ಆಗುವುದಕ್ಕೂ ಆಗಿಲ್ಲ. ಹೀಗಾಗಿ ಸಚಿವ ಕೆ.ಎಸ್.ಈಶ್ವರಪ್ಪಗೆ ಹುಚ್ಚು ಹಿಡಿದಿದೆ. ಆದಷ್ಟು ಬೇಗ ಈಶ್ವರಪ್ಪರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು. ಕೆ.ಎಸ್.ಈಶ್ವರಪ್ಪಗೆ ಆರೋಗ್ಯ ಸಚಿವರು ಚಿಕಿತ್ಸೆ ಕೊಡಿಸಬೇಕು ಎಂದು ಬೆಂಗಳೂರಿನಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈಶ್ವರಪ್ಪ ನೋಟ್ ಎಣಿಸುವ ಮಷೀನ್ ಇಟ್ಟುಕೊಂಡಿದ್ದಾರೆ. ಆದರೂ ಈಶ್ವರಪ್ಪ ಸಿಎಂ, ಡಿಸಿಎಂ ಆಗುವುದಕ್ಕೆ ಆಗಲಿಲ್ಲ. ಹೀಗಾಗಿ K.S.ಈಶ್ವರಪ್ಪ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಚಾಟನೆ ಮಾಡಬೇಕು ಎಂದು ಬೆಂಗಳೂರಿನಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದರು.
ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ: ಕಾಂಗ್ರೆಸ್‌ನವರ ಬಗ್ಗೆ ಈಶ್ವರಪ್ಪ ಅವಾಚ್ಯ ಪದ ಬಳಕೆ ವಿಚಾರವಾಗಿ ಬೆಂಗಳೂರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದುಇದು ಬಿಜೆಪಿಗೆ ನಾಚಿಕೆಗೇಡಿನ ಸಂಗತಿ, ಬಿಜೆಪಿಗೇ ಒಂದು ಕಳಂಕ ಎಂದಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಅವರ ಆಚಾರ ತೋರಿಸುತ್ತೆ. ಬಿಜೆಪಿಯವರ ತಂದೆ ತಾಯಂದಿರು ಈ ಸಂಸ್ಕೃತಿ ಕಲಿಸಿದ್ದಾರೆ. ಇಂತಹ ಭಾಷೆ ಬಳಸುವವರನ್ನು ಪಕ್ಷದಿಂದ ಕಿತ್ತುಹಾಕಬೇಕು. ಈ ರೀತಿ ಕೆಟ್ಟ ಭಾಷೆ, ಕೆಟ್ಟ ಪದ ಬೇರೆಯವರಿಗೂ ಗೊತ್ತಿರುತ್ತೆ. ಅದೇ ಪದವನ್ನು ಅವರ ಮೇಲೆ ಬಳಸಿದರೆ ಹೇಗಿರಬಹುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ: ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದು, ಹಿರಿಯ ಸಚಿವರು… ಉಪ ಮುಖ್ಯಮಂತ್ರಿ ಆಗಿದ್ದವರು ಈ ರೀತಿ ಹೇಳಿಕೆ ನೀಡಬಾರದು.. ಇದು ತಪ್ಪು… ನಿಮಗೆ ಶಕ್ತಿ ಬಂದಿದೆ ಅಂದ್ರೆ… ಏಳು ವರ್ಷ ಮೋದಿ ಸರ್ಕಾರ ಮತ್ತು ಇವರ ಸರಕಾರದಲ್ಲಿ ಆರ್ ಎಸ್ ಎಸ್ ಗೆ ಸಂಪೂರ್ಣ ಹಣ ನೀಡಿದ್ದಾರೆ… ಇವರೇ ಅವರನ್ನು ಬೆಳೆಸಿರುವುದು ಅರ್ಥವಾಗುತ್ತದೆ… ಸ್ಪ್ರಾಂಗ್ ಅಂದ್ರೆ ಹಣಕಾಸಿನಲ್ಲಿ ಆಗಿದೇವೆ ಎನ್ನುವ ಮಾತು.. ಇವರು ಆರ್ ಎಸ್ ಎಸ್ ಗೆ ಹಣ ಕೊಟ್ಟು ಅವರನ್ನು ಸ್ಪ್ರಾಂಗ್ ಮಾಡಿದ್ದಾರೆ.. ಈ ಧಾಟಿ ಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಎಲ್ಲ ವರ್ಗವನ್ನು ಸಚಿವರಾಗಿ ಸಮಾನವಾಗಿ ನೋಡಲು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.
ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ; ಸಂಪುಟದಿಂದ ಕೈಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯ
(minister KS eshwarappa use foul language against karnataka congress in vidhana soudha)
Published On - 1:39 pm, Tue, 10 August 21